ADVERTISEMENT

ಬಂಟ್ವಾಳ: ಸಂವಿಧಾನದ ರಕ್ಷಣೆ, ಜಾಗೃತಿ

​ಪ್ರಜಾವಾಣಿ ವಾರ್ತೆ
Published 16 ಆಗಸ್ಟ್ 2025, 8:01 IST
Last Updated 16 ಆಗಸ್ಟ್ 2025, 8:01 IST
ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಬಿ.ಸಿ.ರೋಡಿನಲ್ಲಿ ಶುಕ್ರವಾರ ಸಂವಿಧಾನ ರಕ್ಷಣೆ ಜಾಗೃತಿ ಕಾರ್ಯಕ್ರಮ ನಡೆಯಿತು
ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಬಿ.ಸಿ.ರೋಡಿನಲ್ಲಿ ಶುಕ್ರವಾರ ಸಂವಿಧಾನ ರಕ್ಷಣೆ ಜಾಗೃತಿ ಕಾರ್ಯಕ್ರಮ ನಡೆಯಿತು    

ಬಂಟ್ವಾಳ: ರಾಜ್ಯದಲ್ಲಿ ಸ್ವಾತಂತ್ರ್ಯ ದಿನಾಚರಣೆ ವೇಳೆ ಸಾರ್ವಜನಿಕರಿಗೆ ಸಂವಿಧಾನ ರಕ್ಷಣೆ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕೆಪಿಸಿಸಿ ನಿರ್ದೇಶನ ನೀಡಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಬಿ.ರಮಾನಾಥ ರೈ ಹೇಳಿದರು.

ಇಲ್ಲಿನ ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಬಿ.ಸಿ.ರೋಡಿನಲ್ಲಿ ಶುಕ್ರವಾರ ನಡೆದ ‘ಸಂವಿಧಾನ ರಕ್ಷಣೆ ಬಗ್ಗೆ ಜಾಗೃತಿ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪ್ರಮುಖರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಬಿ.ಪದ್ಮಶೇಖ‌ರ್ ಜೈನ್, ವಾಸು ಪೂಜಾರಿ, ಬೇಬಿ ಕುಂದ‌ರ್, ಪಿಯೂಸ್ ಎಲ್.ರಾಡ್ರಿಗಸ್, ಜಯಂತಿ ಪೂಜಾರಿ, ಐಡಾ ಸುರೇಶ್, ನವಾಜ್ ಬಡಕಬೈಲು, ಸುರೇಶ್ ನಾವೂರ, ಕೆ.ಸಂಜೀವ ಪೂಜಾರಿ, ವೆಂಕಪ್ಪ ಪೂಜಾರಿ, ಜಗದೀಶ್ ಕುಂದರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಾಲಕೃಷ್ಣ ಅಂಚನ್, ಚಂದ್ರಶೇಖರ ಭಂಡಾರಿ ಭಾಗವಹಿಸಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.