ಬಂಟ್ವಾಳ (ದಕ್ಷಿಣ ಕನ್ನಡ): ಇಲ್ಲಿನ ಅಮ್ಟಾಡಿ ಗ್ರಾಮದ ಕೆಂಪುಗುಡ್ಡೆ ಸಮೀಪದ ಸಾರಿಗೆ ಎಂಬಲ್ಲಿ ಶಂಕಿತ ಡೆಂಗಿ ಜ್ವರದಿಂದ ವಿದ್ಯಾರ್ಥಿ ಶುಕ್ರವಾರ ಮೃತಪಟ್ಟಿದ್ದಾರೆ.
ಸ್ಥಳೀಯ ನಿವಾಸಿ, ಟೈಲರ್ ವೃತ್ತಿಯ ಗೋಪಾಲ ಗೌಡ ಅವರ ಪುತ್ರ ಪಿಯು ವಿದ್ಯಾರ್ಥಿ ಹಿತೇಶ್ (17) ಮೃತಪಟ್ಟವರು.
ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಹಿತೇಶ್‌ರನ್ನು ಗುರುವಾರ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಂತ್ಯಕ್ರಿಯೆ ಶುಕ್ರವಾರ ಸಂಜೆ ನೆರವೇರಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.