ಬಂಟ್ವಾಳ: ಇಲ್ಲಿನ ತೆಂಕಕಜೆಕಾರು ಗ್ರಾಮದ ಪಾದೆಮನೆಯಲ್ಲಿ ವಿಷದ ಹಾವೊಂದು ಕಡಿದ ಪರಿಣಾಮ ಯುವಕ ಸಾವನ್ನಪ್ಪಿದ ಘಟನೆ ಮಂಗಳವಾರ ಸಂಜೆ ನಡೆದಿದೆ. ದಿ.ಇಸ್ಮಾಯಿಲ್ ಅವರ ಪುತ್ರ ಆಶ್ರಫ್ (28) ಮೃತರು. ಕೂಲಿ ಕಾರ್ಮಿಕರಾಗಿದ್ದ ಅವರು ಪಾಂಡವರಕಲ್ಲು ಎಂಬಲ್ಲಿ ಅಡಿಕೆ ಸುಲಿಯುವ ಕೆಲಸ ಮಾಡುತ್ತಿದ್ದ ವೇಳೆ ಕಾಲಿನ ಬೆರಳಿಗೆ ಹಾವು ಕಚ್ಚಿದೆ. ಸಮೀಪದ ನಾಟಿ ವೈದ್ಯರಲ್ಲಿ ಚಿಕಿತ್ಸೆ ಕೊಡಿಸಿದ ಬಳಿಕ ಅವರ ಸ್ಥಿತಿ ಗಂಭೀರವಾಗಿತ್ತು. ನಂತರ ಮಂಗಳೂರಿನ ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಸಾವನ್ನಪ್ಪಿದ್ದಾರೆ. ಪಾಂಡವರಕಲ್ಲು ಎಸ್‌ಕೆಎಸ್‌ಎಸ್‌ಎಫ್ ಸಂಘಟನೆ ಸದಸ್ಯರಾಗಿದ್ದ ಅವರಿಗೆ ಆರು ತಿಂಗಳ ಹಿಂದಷ್ಟೇ ವಿವಾಹವಾಗಿದ್ದು ಪತ್ನಿ ಗರ್ಭಿಣಿ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.