ADVERTISEMENT

ಬಂಟ್ವಾಳ: ಡೆಂಗಿ ಪ್ರಕರಣ ಹೆಚ್ಚಳ

ಸಾಂಕ್ರಾಮಿಕ ರೋಗ ತಡೆಗೆ ಶಾಸಕ ಸೂಚನೆ

​ಪ್ರಜಾವಾಣಿ ವಾರ್ತೆ
Published 23 ಜೂನ್ 2022, 2:51 IST
Last Updated 23 ಜೂನ್ 2022, 2:51 IST
ಬಂಟ್ವಾಳದಲ್ಲಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಸಭೆ ಮಂಗಳವಾರ ನಡೆಯಿತು. ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ತಹಶೀಲ್ದಾರ್ ಡಾ.ಸ್ಮಿತಾ ರಾಮು ಇದ್ದರು
ಬಂಟ್ವಾಳದಲ್ಲಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಸಭೆ ಮಂಗಳವಾರ ನಡೆಯಿತು. ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ತಹಶೀಲ್ದಾರ್ ಡಾ.ಸ್ಮಿತಾ ರಾಮು ಇದ್ದರು   

ಬಂಟ್ವಾಳ: ಇಲ್ಲಿನ ವಾಮದಪದವು ಸಮೀಪದ ಅಜ್ಜಿಬೆಟ್ಟು ಪರಿಸರದಲ್ಲಿ ಡೆಂಗಿ ಪ್ರಕರಣದಿಂದ ಒಬ್ಬರು ಸಾವನ್ನಪ್ಪಿದ್ದು, ಸಾಂಕ್ರಾಮಿಕ ರೋಗ ತಡೆಗಟ್ಟುವಲ್ಲಿ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸುವುದರ ಜೊತೆಗೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದರು.

ಬಿ.ಸಿ.ರೋಡಿನ ಮಿನಿ ವಿಧಾನಸೌಧದಲ್ಲಿ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ನೇತೃತ್ವದಲ್ಲಿ ಮಂಗಳವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಉಪವಿಭಾಗಾಧಿಕಾರಿ ಮದನ್ ಮೋಹನ್, ತಹಶೀಲ್ದಾರ್ ಡಾ. ಸ್ಮಿತಾ ರಾಮು, ಸಿಡಿಪಿಒ ಗಾಯತ್ರಿ ಬಾಯಿ ಎಚ್., ಉಷಾ ಡಿ., ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ಜಯಶ್ರೀ, ತೋಟಗಾರಿಕಾ ಸಹಾಯಕ ನಿರ್ದೇಶಕ ಪ್ರದೀಪ್ ಡಿಸೋಜ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.