ಅಪಘಾತ
–ಪ್ರಾತಿನಿಧಿಕ ಚಿತ್ರ
ಮಂಗಳೂರು: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬೆಂಗಳೂರು ಕಡೆಯಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಇನ್ನೋವಾ ಕಾರು, ಚಾಲಕನ ನಿಯಂತ್ರಣ ತಪ್ಪಿ ಬಂಟ್ವಾಳ ಬಿ.ಸಿ. ರೋಡ್ ಬಳಿ, ನಾರಾಯಣ ಗುರು ವೃತ್ತಕ್ಕೆ ಶನಿವಾರ ಡಿಕ್ಕಿಯಾಗಿ ಮೂವರು ಮೃತಪಟ್ಟಿದ್ದಾರೆ.
ಬೆಂಗಳೂರು ನಿವಾಸಿಗಳಾದ ರವಿ (64), ನಂಜಮ್ಮ (75), ರಮ್ಯಾ (23) ಮೃತರು ಎಂದು ಪೊಲೀಸರು ತಿಳಿಸಿದ್ದಾರೆ.
ಕಾರಿನಲ್ಲಿ 9 ಮಂದಿ ಪ್ರಯಾಣಿಸುತ್ತಿದ್ದರು. ಅವರಲ್ಲಿ, ಸುಶೀಲಾ, ಕೀರ್ತಿ ಕುಮಾರ್, ಕಿರಣ್, ಬಿಂದು, ಪ್ರಶಾಂತ್ ಹಾಗೂ ಚಾಲಕ ಸುಬ್ರಹ್ಮಣ್ಯ ಸೇರಿದಂತೆ ಉಳಿದ 6 ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ವಾಹನದಲ್ಲಿ ಪ್ರಯಾಣಿಸುತ್ತಿದ್ದವರು ಸಂಬಂಧಿಕರು. ಈ ಅಪಘಾತದ ಬಗ್ಗೆ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.