ADVERTISEMENT

ಬಿ.ಸಿ.ರೋಡು: ಗುಬ್ಬಚ್ಚಿಗೂಡು ಅಭಿಯಾನ

​ಪ್ರಜಾವಾಣಿ ವಾರ್ತೆ
Published 25 ಮಾರ್ಚ್ 2025, 5:54 IST
Last Updated 25 ಮಾರ್ಚ್ 2025, 5:54 IST
ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡು ಸಮೀಪದ ಅಜ್ಜಿಬೆಟ್ಟು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುಬ್ಬಚ್ಚಿ ಗೂಡು ಅಭಿಯಾನ ಕುರಿತು ನಿತ್ಯಾನಂದ ಶೆಟ್ಟಿ, ರಮ್ಯಾ ನಿತ್ಯಾನಂದ ಶೆಟ್ಟಿ ಸೋಮವಾರ ಪ್ರಾತ್ಯಕ್ಷಿಕೆ ನೀಡಿದರು
ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡು ಸಮೀಪದ ಅಜ್ಜಿಬೆಟ್ಟು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುಬ್ಬಚ್ಚಿ ಗೂಡು ಅಭಿಯಾನ ಕುರಿತು ನಿತ್ಯಾನಂದ ಶೆಟ್ಟಿ, ರಮ್ಯಾ ನಿತ್ಯಾನಂದ ಶೆಟ್ಟಿ ಸೋಮವಾರ ಪ್ರಾತ್ಯಕ್ಷಿಕೆ ನೀಡಿದರು   

ಬಂಟ್ವಾಳ: ಅಳಿವಿನ ಅಂಚಿನಲ್ಲಿರುವ ಪಕ್ಷಿಸಂಕುಲದ ರಕ್ಷಣೆಗಾಗಿ ರಾಜ್ಯದ ವಿವಿಧ ಶಾಲೆಗಳಿಗೆ ತೆರಳಿ ಮಕ್ಕಳಿಗೆ ಜಾಗೃತಿ ಅಭಿಯಾನ ನಡೆಸುತ್ತಿರುವುದಾಗಿ ಗುಬ್ಬಚ್ಚಿ ಗೂಡು ಅಭಿಯಾನ ರೂವಾರಿ ನಿತ್ಯಾನಂದ ಶೆಟ್ಟಿ ಬದ್ಯಾರು, ರಮ್ಯಾ ನಿತ್ಯಾನಂದ ಶೆಟ್ಟಿ ದಂಪತಿ ಹೇಳಿದರು.

ಇಲ್ಲಿನ ಬಿ.ಸಿ.ರೋಡು ಸಮೀಪದ ಅಜ್ಜಿಬೆಟ್ಟು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ‘ಗುಬ್ಬಚ್ಚಿ ಗೂಡು ಅಭಿಯಾನ’ ಕಾರ್ಯಕ್ರಮದಲ್ಲಿ ಅವರು ಪ್ರಾತ್ಯಕ್ಷಿಕೆ ನೀಡಿ ಮಾತನಾಡಿದರು.

ಈಗಾಗಲೇ 313 ಶಾಲೆಗಳಲ್ಲಿ ಜಾಗೃತಿ ಕಾರ್ಯಕ್ರಮ ನಡೆಸಲಾಗಿದ್ದು, ವಿವಿಧೆಡೆ ಪಕ್ಷಿಗಳಿಗೆ ಆಹಾರ ಮತ್ತು ನೀರು ಇಡುವ ಮಣ್ಣಿನ ಪಾತ್ರೆ ವಿತರಿಸಲಾಗಿದೆ ಎಂದರು.

ADVERTISEMENT

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಹರೀಶ್ ಮಾಂಬಾಡಿ, ಮುಖ್ಯಶಿಕ್ಷಕಿ ಲಕ್ಷ್ಮೀ ಕೆ. ಮಾತನಾಡಿದರು. ಹಿರಿಯ ಶಿಕ್ಷಕಿ ತಾಹಿರಾ, ಶಿಕ್ಷಕಿಯರಾದ ಲಾವಣ್ಯ, ಪೂರ್ಣಿಮಾ, ಶಿವಮೂರ್ತಿ, ದಿವ್ಯಾ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.