ADVERTISEMENT

ರಾಷ್ಟ್ರೀಯ ಶೋಕಾಚರಣೆ: ಬೀಚ್ ಉತ್ಸವ ಮುಂದೂಡಿಕೆ

​ಪ್ರಜಾವಾಣಿ ವಾರ್ತೆ
Published 27 ಡಿಸೆಂಬರ್ 2024, 15:52 IST
Last Updated 27 ಡಿಸೆಂಬರ್ 2024, 15:52 IST

ಮಂಗಳೂರು: ಮಾಜಿ ಪ್ರಧಾನಿ ಮನಮೋಹನ ಸಿಂಗ್‌ ಮೃತಪಟ್ಟಿರುವುದರಿಂದ ಸರ್ಕಾರ 7 ದಿನಗಳ ಶೋಕಾಚರಣೆ ಘೋಷಿಸಿದ್ದು, ದಕ್ಷಿಣ ಕನ್ನಡ ಜಿಲ್ಲಾಡಳಿತ ತಣ್ಣೀರುಬಾವಿ ಬೀಚ್‌ನಲ್ಲಿ ಡಿ.28, 29ರಂದು ಹಮ್ಮಿಕೊಂಡಿದ್ದ ಬೀಚ್ ಉತ್ಸವವನ್ನು ಮುಂದೂಡಿದೆ.

ಕರಾವಳಿ ಉತ್ಸವದ ಅಂಗವಾಗಿ ಹಮ್ಮಿಕೊಂಡಿರುವ ಬೀಚ್‌ ಉತ್ಸವದ ಮುಂದಿನ ದಿನಾಂಕವನ್ನು ಶೀಘ್ರದಲ್ಲೇ ಘೋಷಿಸಲಾಗುವುದು. ಡಿ.29ರಂದು ನಿಗದಿಯಾಗಿದ್ದ ಕುದ್ರೋಳಿ ಗಣೇಶ್ ಅವರ ಜಾದೂ ಪ್ರದರ್ಶನವನ್ನೂ ಮುಂದೂಡಲಾಗಿದೆ ಎಂದು ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT