ADVERTISEMENT

ಬ್ಯಾರಿ ಅಕಾಡೆಮಿ ಗೌರವ ಪ್ರಶಸ್ತಿಗೆ ಆಯ್ಕೆ

​ಪ್ರಜಾವಾಣಿ ವಾರ್ತೆ
Published 27 ಆಗಸ್ಟ್ 2024, 23:58 IST
Last Updated 27 ಆಗಸ್ಟ್ 2024, 23:58 IST
ಹಂಝತ್‌ ಉಲ್ಲಾ
ಹಂಝತ್‌ ಉಲ್ಲಾ   

ಮಂಗಳೂರು: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ 2022 ಮತ್ತು 2023ನೇ ಸಾಲಿನ ‘ಗೌರವ ಪ್ರಶಸ್ತಿ’ಗೆ ಆರು ಮಂದಿ ಸಾಧಕರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು ತಲಾ ₹50ಸಾವಿರ ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ.

2022ನೇ ಸಾಲಿನ ಗೌರವ ಪ್ರಶಸ್ತಿಗೆ ಬೆಂಗಳೂರಿನ ಹಂಝತ್‌ ಉಲ್ಲಾ ಕುವೇಂಡ (ಬ್ಯಾರಿ ಭಾಷೆ ಮತ್ತು ಸಂಘಟನೆ), ಮರಿಯಮ್‌ ಇಸ್ಮಾಯಿಲ್‌ ಉಳ್ಳಾಲ (ಬ್ಯಾರಿ ಸಾಹಿತ್ಯ) ಮತ್ತು ಎಂ.ಜಿ. ಶಾಹುಲ್‌ ಹಮೀದ್‌ ಗುರುಪುರ (ಬ್ಯಾರಿ ಸಂಸ್ಕೃತಿ ಮತ್ತು ಕಲೆ) ಆಯ್ಕೆಯಾಗಿದ್ದಾರೆ.

2023ನೇ ಸಾಲಿನ ಪ್ರಶಸ್ತಿಗೆ ಟಿ.ಎ. ಆಲಿಯಬ್ಬ ಜೋಕಟ್ಟೆ (ಬ್ಯಾರಿ ಭಾಷೆ ಮತ್ತು ಸಂಘಟನೆ), 
ಅಶ್ರಫ್‌ ಅಪೋಲೊ ಕಲ್ಲಡ್ಕ (ಬ್ಯಾರಿ
ಸಂಸ್ಕೃತಿ ಮತ್ತು ಕಲೆ) ಹಾಗೂ ಮುಹಮ್ಮದ್‌ ಶರೀಫ್‌ ನಿರ್ಮುಂಜೆ (ಬ್ಯಾರಿ ಸಾಹಿತ್ಯ) ಅವರನ್ನು ಆಯ್ಕೆ ಮಾಡಲಾಗಿದೆ.

ADVERTISEMENT

ಪ್ರಶಸ್ತಿ ಪ್ರದಾನ ಸಮಾರಂಭವು ಸೆ. 6ರಂದು ಸಂಜೆ 4.30ಕ್ಕೆ ಮಂಗಳೂರು ಪುರಭವನದಲ್ಲಿ ನಡೆಯಲಿದೆ ಅಕಾಡೆಮಿಯ ಅಧ್ಯಕ್ಷ ಉಮರ್‌ ಯು. ಎಚ್.  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶರೀಫ್‌ ನಿರ್ಮುಂಜೆ
ಮರಿಯಮ್‌ ಇಸ್ಮಾಯಿಲ್‌
ಅಶ್ರಫ್‌ ಅಪೋಲೊ
ಶಾಹುಲ್‌ ಹಮೀದ್‌
ಟಿ.ಎ.ಆಲಿಯಬ್ಬ ಜೋಕಟ್ಟೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.