ಭಾರತಿ ಶೆಟ್ಟಿ
ಬೆಳ್ತಂಗಡಿ (ದಕ್ಷಿಣ ಕನ್ನಡ): ಕುವೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭಾರತಿ ಶೆಟ್ಟಿ ಅವರು ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಹರಿಪ್ರಸಾದ್ ಇರುವ ರ್ತಾಯ ಎಂಬುವರು ಬೆಳ್ತಂಗಡಿ ಠಾಣೆಗೆ
ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
‘ಮೇ 12ರಂದು ಸುಹಾಸ್ ಶೆಟ್ಟಿ ನುಡಿ ನಮನ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಭಾರತಿ ಶೆಟ್ಟಿ, ‘ಗುರುವಾಯನಕೆರೆಯಲ್ಲಿ ಮುಸ್ಲಿಮರ ಸಂಖ್ಯೆ ಜಾಸ್ತಿ, ಅವರ ಬಳಿ ವ್ಯಾಪಾರ, ವ್ಯವಹಾರ ಮಾಡುವು
ದನ್ನು ನಿಲ್ಲಿಸಬೇಕು. ಮುಸ್ಲಿಂ ರಿಕ್ಷಾ ಚಾಲಕರು ನಮ್ಮಲ್ಲಿ ಚಂದವಾಗಿ ಮಾತನಾಡಿ ನಮಗೆ ಗೊತ್ತಿಲ್ಲದೆ ಮೋಸ ಮಾಡುತ್ತಾರೆ’ ಎಂದಿದ್ದರು. ಹೀಗಾಗಿ, ಇವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಹರಿಪ್ರಸಾದ್ ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.