ಬೆಳ್ತಂಗಡಿ: ಬಳಂಜದ ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಸುಮಾರು 24 ವರ್ಷ ಶಿಕ್ಷಕಿಯಾಗಿ ಕಾರ್ಯನಿರ್ವಹಿಸಿ ನಿವೃತ್ತರಾದ ಗ್ರೇಟ್ಟಾ ಮರಿಯ ಡಿಮೆಲ್ಲೊ ಅವರನ್ನು ಶಾಲೆಯಲ್ಲಿ ಸನ್ಮಾನಿಸಲಾಯಿತು.
ಎಸ್‌ಡಿಎಂಸಿ ಅಧ್ಯಕ್ಷ ರತ್ನಾಕರ ಪೂಜಾರಿ, ಬಳಂಜ ಶಾಲಾ ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಚಂದ್ರಶೇಖರ್ ಪಿ.ಕೆ., ಬಳಂಜ ಶಿಕ್ಷಣ ಟ್ರಸ್ಟ್ ಅಧ್ಯಕ್ಷ ಮನೋಹರ್ ಬಳಂಜ, ಕಾರ್ಯದರ್ಶಿ ರತ್ನರಾಜ್, ಟ್ರಸ್ಟಿಗಳಾದ ಬಿ.ಪ್ರಮೋದ್ ಕುಮಾರ್, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹರೀಶ್ ವೈ.ಬಳಂಜ, ರೆನಿಲ್ದಾ ಜೋಯ್ಸ್, ಕೊಕ್ಕಡ ಸಿಆರ್‌ಪಿ ವಿಲ್ಫ್ರೆಡ್, ಪ್ರೌಢಶಾಲೆ ಮುಖ್ಯಶಿಕ್ಷಕಿ ಸುಲೋಚನಾ, ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕ ರಂಗಸ್ವಾಮಿ ಸಿ.ಆರ್. ಭಾಗವಹಿಸಿದ್ದರು.
ಗ್ರೇಟ್ಟಾ ಮರಿಯ ಡಿಮೆಲ್ಲೊ ಅವರು ಶಾಲೆಗೆ ₹ 54 ಸಾವಿರ ಮೌಲ್ಯದ ಪ್ರಾಜೆಕ್ಟರ್‌ನ್ನು ಕೊಡುಗೆಯಾಗಿ ನೀಡಿದರು.
ಎಸ್‌ಡಿಎಂಸಿ ಸದಸ್ಯೆ ಚೇತನಾ ನಿರೂಪಿಸಿ, ಶಿಕ್ಷಕಿ ಕೀರ್ತಿ ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.