ಬೆಳ್ತಂಗಡಿ: ‘ತಾಲ್ಲೂಕಿನ ಅಭಿವೃದ್ಧಿ ಬಗ್ಗೆ ಮಾತನಾಡಬೇಕಾಗಿದ್ದ ತ್ರೈಮಾಸಿಕ ಕೆಡಿಪಿ ಸಭೆ ನಡೆಸಲು ಶಾಸಕ ಹರೀಶ್ ಪೂಂಜ ಆಸಕ್ತಿ ತೊರಿಸುತ್ತಿಲ್ಲ’ ಎಂದು ತಾಲ್ಲೂಕು ಪಂಚಾಯಿತಿ ಮುಂದೆ ಸೋಮವಾರ ಕೆಡಿಪಿ ಸದಸ್ಯರು ಮತ್ತು ಬೆಳ್ತಂಗಡಿ ಯುವ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿದರು.
ಜಿಲ್ಲೆಯಲ್ಲಿ ನಡೆಯುತ್ತಿರುವ ಕೆಡಿಪಿಯಲ್ಲಿ ಸಕ್ರಿಯವಾಗಿ ಜಿಲ್ಲೆಯ ವಿಚಾರ ಮಾತನಾಡಲಾಗುತ್ತಿದೆ. ಉಸ್ತುವಾರಿ ಸಚಿವರು ಅದರ ಬಗ್ಗೆ ಗಮನ ವಹಿಸುತ್ತಿದ್ದಾರೆ. ಈ ಸಭೆಗೆ ಶಾಸಕರು ಹಾಜರಾಗಿ ಕೆಡಿಪಿ ಸಭೆಗೆ ಬಹಿಷ್ಕಾರ ಹಾಕಿ ಹೊರ ನಡೆಯುತ್ತಾರೆ. ನಂತರ ಬೆಳ್ತಂಗಡಿಯಲ್ಲಿ ಅಭಿವೃದ್ಧಿ ನಡೆಯುತ್ತಿಲ್ಲ, ಅನುದಾನ ಬರುತ್ತಿಲ್ಲ ಎನ್ನುತ್ತಾರೆ. ಇಲ್ಲಿನ ಕೆಡಿಪಿ ಸಭೆ ಮಾಡಲು ಶಾಸಕ ಮುಂದಾಗುತ್ತಿಲ್ಲ ಎಂದು ಆರೋಪಿಸಿದರು.
ಬೆಳ್ತಂಗಡಿಗೆ ಬೇಕಾಗಿರುವ ಮೂಲ ಸೌಕರ್ಯಗಳ ಬಗ್ಗೆ ಚರ್ಚೆ ಮಾಡಿ ಸರ್ಕಾರಕ್ಕೆ ವರದಿ ಒಪ್ಪಿಸಬೇಕಿದೆ. ಆದರೆ, ಶಾಸಕ ಈ ಬಗ್ಗೆ ಗಮನ ಹರಿಸದೆ ದ್ವೇಷ ಹರಡುತ್ತಿದ್ದಾರೆ. ಈಗಾಗಲೇ ಸರ್ಕಾರ ಐದು ಜನ ನಾಮನಿರ್ದೆಶಿತ ಸದಸ್ಯರನ್ನು ನೇಮಕ ಮಾಡಿ ಎರಡು ವರ್ಷ ಆದರೂ ಕೆಡಿಪಿ ಸಭೆ ಮಾಡಿಲ್ಲ. ಕೂಡಲೇ ಸಭೆ ಕರೆದು ತಾಲ್ಲೂಕಿನ ಅಭಿವೃದ್ಧಿಗೆ ಗಮನ ಕೊಡಬೇಕೆಂದು ಒತ್ತಾಯಿಸಲಾಯಿತು.
ಜಿಲ್ಲಾ ಕೆಡಿಪಿ ಸದಸ್ಯರಾದ ಸಂತೋಷ್ ಕುಮಾರ್, ತಾಲ್ಲೂಕು ಕೆಡಿಪಿ ಸದಸ್ಯರಾದ ಸುನಿಲ್ ಕುಮಾರ್ ಜೈನ್ ಶಿರ್ಲಾಲು, ಮೆಲ್ವಿನ್ ಸಿಕ್ಕೇರಾ, ಸುಮತಿ ಶೆಟ್ಟಿ ಕಣಿಯೂರು, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ ನವಾಜ್, ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಿತೇಶ್, ಉಮೇರ ಬಾನು, ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಸುನಿಲ್ ಡೇಸಾ, ಯುವ ಕಾಂಗ್ರೆಸ್ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಅಧ್ಯಕ್ಷ ಹಕೀಮ್ ಕೊಕ್ಕಡ, ಗ್ರಾಮೀಣ ಯುವ ಕಾಂಗ್ರೆಸ್ ಅಧ್ಯಕ್ಷ ಅಝರ್ ನಾವೂರು, ಯುವ ಕಾಂಗ್ರೆಸ್ ವಿಧಾನ ಸಭಾ ಕ್ಷೇತ್ರ ಉಪಾಧ್ಯಕ್ಷ ಅರುಣ್ ಲೋಬೊ, ನವೀನ್ ಗೌಡ ಸವಣಾಲು, ದೀಪಕ್ ಕೋಟ್ಯಾನ್, ಅವಿನಾಶ್ ಕುರ್ತೋಡಿ, ರಾಘವೇಂದ್ರ ಪೂಜಾರಿ, ಗಣೇಶ್ ಕಾಣಿಯೂರು, ಪ್ರಜ್ವಲ್ ಜೈನ್, ಯತೀಶ್ ಧರ್ಮಸ್ಥಳ, ಅಭಿದೇವ್ ಆರಿಗ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.