ಸತೀಶ್
ಬೆಳ್ತಂಗಡಿ (ದಕ್ಷಿಣ ಕನ್ನಡ): ತಾಲ್ಲೂಕು ಆಡಳಿತ ಸೌಧದ ಪ್ರಥಮ ದರ್ಜೆ ಸಹಾಯಕ ಕುಸಿದು ಬಿದ್ದು ಮೃತಪಟ್ಟಿದ್ದಾರೆ.
ಬೆಳ್ತಂಗಡಿ ತಾಲ್ಲೂಕು ಆಡಳಿತಸೌಧದ ಪ್ರಥಮ ದರ್ಜೆ ಸಹಾಯಕ ಸತೀಶ್ (46) ಮಂಗಳವಾರ ಬೆಳಿಗ್ಗೆ ಸ್ನಾನ ಮಾಡಿ ಹೊರ ಬರುವಾಗ ಕುಸಿದು ಬಿದ್ದಿದ್ದಾರೆ.
ಕುಸಿದು ಬಿದ್ದ ಸತೀಶ್ ಅವರನ್ನು ಪತ್ನಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದು, ಪರೀಕ್ಷಿಸಿದ ವೈದ್ಯರು ಹೃದಯಾಘಾತದಿಂದ ಮೃತಪಟ್ಟಿದ್ದಾರೆಂದು ತಿಳಿಸಿದ್ದಾರೆ. ಅವರು ಲಾಯಿಲ ಬಳಿಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಸತೀಶ್ ಹಾಸನ ಜಿಲ್ಲೆಯವರು. ಅವರಿಗೆ ಪತ್ನಿ ಜಯಶ್ರೀ ಮತ್ತು ಪುತ್ರ ಇದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.