ADVERTISEMENT

ಶ್ರೀ ಗುರುದೇವ ಕಾಲೇಜಿನಲ್ಲಿ ಎನ್‍ಎಸ್‍ಎಸ್ ಚಟುವಟಿಕೆಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2018, 10:13 IST
Last Updated 19 ಸೆಪ್ಟೆಂಬರ್ 2018, 10:13 IST
ಬೆಳ್ತಂಗಡಿಯ ಶ್ರೀ ಗುರುದೇವ ಪ್ರಥಮದರ್ಜೆ ಕಾಲೇಜಿನ ಎನ್‍ಎಸ್‍ಎಸ್ ಕಾರ್ಯಚಟುವಟಿಕೆಗಳನ್ನು ಮಾಜಿ ಶಾಸಕ ಕೆ. ವಸಂತ ಬಂಗೇರ ಉದ್ಘಾಟಿಸಿದರು. (ಬೆಳ್ತಂಗಡಿ ಚಿತ್ರ)
ಬೆಳ್ತಂಗಡಿಯ ಶ್ರೀ ಗುರುದೇವ ಪ್ರಥಮದರ್ಜೆ ಕಾಲೇಜಿನ ಎನ್‍ಎಸ್‍ಎಸ್ ಕಾರ್ಯಚಟುವಟಿಕೆಗಳನ್ನು ಮಾಜಿ ಶಾಸಕ ಕೆ. ವಸಂತ ಬಂಗೇರ ಉದ್ಘಾಟಿಸಿದರು. (ಬೆಳ್ತಂಗಡಿ ಚಿತ್ರ)   

ಬೆಳ್ತಂಗಡಿ : ‘ವಿದ್ಯಾರ್ಥಿಗಳು ಕಾಲೇಜು ವಿದ್ಯಾಭ್ಯಾಸದ ಜತೆಗೆ ನಾಯಕತ್ವ ವಿಧಾನ ಕಲಿಯಬೇಕು. ಎನ್‍ಎಸ್‍ಎಸ್‍ನಂತಹ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಉತ್ತಮ ವ್ಯಕ್ತಿತ್ವ ಬೆಳೆಸಿಕೊಳ್ಳಬೇಕು’ ಎಂದು ಬೆಳ್ತಂಗಡಿ ಶ್ರೀ ಗುರುದೇವ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ಕೆ. ವಸಂತ ಬಂಗೇರ ಹೇಳಿದರು.

ಬೆಳ್ತಂಗಡಿ ಶ್ರೀ ಗುರುದೇವ ಪ್ರಥಮದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಂಪನ್ಮೂಲ ವ್ಯಕ್ತಿ ಶ್ರೀ ಗುರುದೇವ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸಕಿ ಹೇಮಾವತಿ ಮಾತನಾಡಿ ಎನ್‍ಎಸ್‍ಎಸ್ ಬಗೆಗಿನ ಮಾಹಿತಿಯನ್ನು ನೀಡಿದರು.

ADVERTISEMENT

ಕಾಲೇಜಿನ ಪ್ರಾಂಶುಪಾಲ ಎ ಕೃಷ್ಣಪ್ಪ ಪೂಜಾರಿ ವೇದಿಕೆಯಲ್ಲಿದ್ದರು. ಎನ್‍ಎಸ್‍ಎಸ್ ವಿದ್ಯಾರ್ಥಿಗಳಾದ ತೃತೀಯ ಬಿ.ಕಾಂ ತರಗತಿಯ ಮಸೂದ್ ಮತ್ತು ತೃತೀಯ ಬಿ.ಎ. ತರಗತಿಯ ಲಕ್ಷ್ಮೀ ಅನಿಸಿಕೆಯನ್ನು ವ್ಯಕ್ತಪಡಿಸಿದರು.

ಕಾಲೇಜಿನ ಎನ್‍ಎಸ್‍ಎಸ್ ಯೋಜನಾಧಿಕಾರಿ ಬಿ.ಎ.ಶಮೀವುಲ್ಲಾ ಸ್ವಾಗತಿಸಿದರು. ಘಟಕದ ನಾಯಕಿ ಮಮತಾ ಕೆ.ಕೆ ಕಾರ್ಯಕ್ರಮ ನಿರೂಪಿಸಿ , ನಾಯಕ ಅಬ್ದುಲ್ ಬಾಶಿತ್ ಧನ್ಯವಾದವಿತ್ತರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.