ADVERTISEMENT

‘ಮಹಿಳೆಯರು ಆರ್ಥಿಕ ಶಕ್ತಿವಂತರಾಗಿ’

ಸಂಜೀವಿನಿ ತಾಲ್ಲೂಕು ಮಟ್ಟದ ಒಕ್ಕೂಟ ಉದ್ಘಾಟಿಸಿದ ಶಾಸಕ ಹರೀಶ್ ಪೂಂಜಾ

​ಪ್ರಜಾವಾಣಿ ವಾರ್ತೆ
Published 15 ಜೂನ್ 2022, 6:46 IST
Last Updated 15 ಜೂನ್ 2022, 6:46 IST
ಬೆಳ್ತಂಗಡಿ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶಾಸಕ ಹರೀಶ್ ಪೂಂಜಾ ಅವರು ಸಂಜೀವಿನಿ ತಾಲ್ಲೂಕು ಮಟ್ಟದ ಒಕ್ಕೂಟವನ್ನು ಉದ್ಘಾಟಿಸಿದರು
ಬೆಳ್ತಂಗಡಿ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶಾಸಕ ಹರೀಶ್ ಪೂಂಜಾ ಅವರು ಸಂಜೀವಿನಿ ತಾಲ್ಲೂಕು ಮಟ್ಟದ ಒಕ್ಕೂಟವನ್ನು ಉದ್ಘಾಟಿಸಿದರು   

ಬೆಳ್ತಂಗಡಿ: ‘ಸ್ವ ಉದ್ಯೋಗದಿಂದ ಸ್ವಾವಲಂಬನೆಯನ್ನು ಬೆಳ್ತಂಗಡಿ ಸಂಜೀವಿನಿ ಸ್ವಸಹಾಯ ಸಂಘದ ಸದಸ್ಯರು ಸಾಧಿಸಿ ತೋರಿಸಿದ್ದು, ಹೊಸ ನೇತ್ರಾವತಿ ಸಂಜೀವಿನಿ ಒಕ್ಕೂಟದ ಸದಸ್ಯರು ಇನ್ನಷ್ಟು ಸ್ವ ಉದ್ಯೋಗದಲ್ಲಿ ತೊಡಗಿಕೊಳ್ಳಬೇಕು’ ಎಂದು ಶಾಸಕ ಹರೀಶ್ ಪೂಂಜಾ ಹೇಳಿದರು.

ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ, ಬೆಳ್ತಂಗಡಿ ತಾಲ್ಲೂಕು ಪಂಚಾಯಿತಿ ಸಹಯೋಗದಲ್ಲಿ ಸಂಜೀವಿನಿ ತಾಲ್ಲೂಕು ಮಟ್ಟದ ಒಕ್ಕೂಟದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

‘ತಾಲ್ಲೂಕಿನ 47 ಗ್ರಾಮಗಳಲ್ಲಿ ಒಕ್ಕೂಟಗಳನ್ನು ರಚಿಸಿ ವಿವಿಧ ಸ್ವ ಉದ್ಯೋಗಗಳಲ್ಲಿ ತೊಡಗಿಕೊಂಡವರಿಗೆ ಆರ್ಥಿಕ ನೆರವು ನೀಡಲಾಗುತ್ತಿದೆ’ ಎಂದರು. ತಾಲ್ಲೂಕು ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಕುಸುಮಾಧರ್ ಮಾತನಾಡಿದರು.

ADVERTISEMENT

ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಹರಿಪ್ರಸಾದ್ ಮಾತನಾಡಿ, ‘ಬಡತನದಿಂದ ದೂರ ಮಾಡುವ ಯೋಜನೆಯೆ ಸಂಜೀವಿನಿ ಕಾರ್ಯಕ್ರಮ’ ಎಂದರು. ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರಾದ ವಾಣಿ, ಶಕುಂತಲಾ, ನೇತ್ರಾವತಿ, ಸಂಜೀವಿನಿ ಒಕ್ಕೂಟದ ಅಧ್ಯಕ್ಷ ಮಧುರ, ಉಪಾಧ್ಯಕ್ಷೆ ತೇಜಸ್ವಿ, ಕಾರ್ಯದರ್ಶಿ ಗಿರಿಜಾ, ಜೊತೆ ಕಾರ್ಯದರ್ಶಿ ಧನವತಿ, ಕೋಶಾಧಿಕಾರಿ ಶೀಲಾವತಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.