
ಪ್ರಜಾವಾಣಿ ವಾರ್ತೆ
ಸಾವು (ಪ್ರಾತಿನಿಧಿಕ ಚಿತ್ರ)
ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿರುವ ಮದ್ದಡ್ಕದಲ್ಲಿ ಕಾಮಗಾರಿಯ ವಾಹನದ ಅಡಿಗೆ ಸಿಲುಕಿ ವ್ಯಕ್ತಿಯೊಬ್ಬರು ಗುರುವಾರ ಮೃತಪಟ್ಟಿದ್ದಾರೆ.
ಮೃತವ್ಯಕ್ತಿ ಕಿಲ್ಲೂರು ನಿವಾಸಿಯಾಗಿರುವ ಹಂಸ (70) ಮೃತಪಟ್ಟವರು.
ರಸ್ತೆ ಕಾಮಗಾರಿ ನಡೆಯುತ್ತಿದ್ದ ಪ್ರದೇಶಕ್ಕೆ ಇಳಿದು ಅವರು ನಡೆದುಕೊಂಡು ಹೋಗುತ್ತಿದ್ದ ವೇಳೆ ಕಾಮಗಾರಿಯ ಯಂತ್ರವೊಂದರ ಚಾಲಕ ವೃದ್ಧನನ್ನು ಗಮನಿಸದೆ, ವಾಹನ ಚಲಾಯಿಸಿದಾಗ ಅವಘಡ ನಡೆದಿದೆ.
ಬೆಳ್ತಂಗಡಿ ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.