ADVERTISEMENT

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜಗೆ ಕೋವಿಡ್‌ ದೃಢ

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2020, 15:52 IST
Last Updated 5 ಆಗಸ್ಟ್ 2020, 15:52 IST
ಹರೀಶ್‌ ಪೂಂಜ
ಹರೀಶ್‌ ಪೂಂಜ   

ಮಂಗಳೂರು: ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜ ಅವರಿಗೆ ಕೋವಿಡ್‌ ಸೋಂಕು ತಗುಲಿರುವುದು ಬುಧವಾರ ದೃಢಪಟ್ಟಿದೆ. ಮನೆಯಲ್ಲೇ ಇದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

‘ಸಣ್ಣ ಮಟ್ಟಿನ ಜ್ವರ ಇದ್ದ ಕಾರಣ ಕೋವಿಡ್‌–19 ಪತ್ತೆ ಪರೀಕ್ಷೆ ಮಾಡಿಸಿದ್ದು, ಸೋಂಕು ತಗುಲಿರುವುದು ದೃಢಪಟ್ಟಿದೆ. ಸಣ್ಣ ಪ್ರಮಾಣದ ಜ್ವರದ ಹೊರತಾಗಿ ಬೇರೆ ಯಾವುದೇ ಲಕ್ಷಣಗಳಿಲ್ಲದ ಕಾರಣದಿಂದ ಮನೆಯಲ್ಲೇ ಇದ್ದು ಚಿಕಿತ್ಸೆ ಪಡೆಯುತ್ತಿರುವೆ. ಕೆಲವು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದಿರುವವರು ಕ್ವಾರಂಟೈನ್‌ನಲ್ಲಿ ಇದ್ದು, ಮುನ್ನೆಚ್ಚರಿಕೆ ವಹಿಸಬೇಕು’ ಎಂದು ಶಾಸಕರು ತಮ್ಮ ಫೇಸುಬುಕ್‌ ಖಾತೆಯಲ್ಲಿ ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT