ADVERTISEMENT

ಬೆಳ್ತಂಗಡಿ: ಶಾಸಕ ಹರೀಶ್‌ ಪೂಂಜ ಮನೆ ಎದುರು ಪೊಲೀಸರು, ಬಂಧನ ಸಾಧ್ಯತೆ

​ಪ್ರಜಾವಾಣಿ ವಾರ್ತೆ
Published 22 ಮೇ 2024, 10:19 IST
Last Updated 22 ಮೇ 2024, 10:19 IST
<div class="paragraphs"><p>ಶಾಸಕ ಹರೀಶ್‌ ಪೂಂಜ ಮನೆ ಎದುರು  ಪೊಲೀಸರು</p></div>

ಶಾಸಕ ಹರೀಶ್‌ ಪೂಂಜ ಮನೆ ಎದುರು ಪೊಲೀಸರು

   

ಬೆಳ್ತಂಗಡಿ (ದಕ್ಷಿಣ ಕನ್ನಡ): ಇಲ್ಲಿಯ ಶಾಸಕ ಹರೀಶ್ ಪೂಂಜ ಅವರ ನಿವಾಸದ ಎದುರು ಪೊಲೀಸರು ಬೀಡುಬಿಟ್ಟಿದ್ದಾರೆ.

ಮೇ.18 ರಂದು ಅಕ್ರಮ ಕಲ್ಲು ಗಣಿಗಾರಿಕೆ ಆರೋಪಕ್ಕೆ ಸಂಬಂಧಿಸಿದಂತೆ ಪೊಲೀಸರು ಬಿಜೆಪಿ ಯುವ ಮೋರ್ಚಾ ಮಂಡಲ ಘಟಕದ ಅಧ್ಯಕ್ಷರನ್ನು ಬಂಧಿಸಿದ್ದರು.

ADVERTISEMENT

ಇದನ್ನು ಖಂಡಿಸಿ ಶಾಸಕ ಹರೀಶ್ ಪೂಂಜ ಕಾರ್ಯಕರ್ತರೊಂದಿಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಮಧ್ಯರಾತ್ರಿ ಪ್ರತಿಭಟಿಸಿ ಪೊಲೀಸರನ್ನು ನಿಂದಿಸಿದ್ದರು.

ಈ ವಿಚಾರವಾಗಿ ಪೊಲೀಸರು ಶಾಸಕರ ಮೇಲೂ ಪ್ರಕರಣ ದಾಖಲಿಸಿಕೊಂಡಿದ್ದರು.

ಬಿಜೆಪಿ ಮುಖಂಡನ ಬಂಧನ ಹಾಗೂ ತನ್ನ ಮೇಲೆ ಪ್ರಕರಣ ದಾಖಲಾಗಿದ್ದನ್ನು ವಿರೋಧಿಸಿ ಮೇ.20 ರಂದು ತಾಲ್ಲೂಕು ಆಡಳಿತ ಕಚೇರಿಯು ಮುಂದೆ ಪ್ರತಿಭಟನೆ ನಡೆಸಿದ್ದರು.

ಶಾಸಕರು ಅನುಮತಿ ಪಡೆಯದೇ ಪ್ರತಿಭಟನೆ ನಡೆಸಿದ್ದಾರೆ, ಪೊಲೀಸ್ ಅಧಿಕಾರಿಗಳನ್ನು ನಿಂದಿಸಿದ್ದಾರೆ ಎಂದು ಎರಡನೇ ಪ್ರಕರಣ ದಾಖಲಿಸಲಾಗಿತ್ತು

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹರೀಶ್ ಪೂಂಜ ಬಂಧನಕ್ಕೆ ಮುಂದಾಗಿದ್ದು, ಅವರ ಗರ್ಡಾಡಿ ನಿವಾಸದ ಮುಂದೆ ಪೊಲೀಸ್ ತಂಡ ಸಜ್ಜಾಗಿದೆ. ಯಾವುದೇ ಸಮಯದಲ್ಲೂ ಹರೀಶ್ ಪೂಂಜ ಬಂಧನದ ಸಾಧ್ಯತೆ ಇದೆ ಎನ್ನಲಾಗಿದೆ.

ಈ ಹಿನ್ನೆಲೆ ಅವರ ಮನೆಗೆ ಸಾರ್ವಜನಿಕ‌ ಭೇಟಿಗೆ ಪೊಲೀಸರು ನಿರಾಕರಿಸಿದ್ದು, ಮನೆಗೆ ಹೋಗುವ ರಸ್ತೆಗೆ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ವಿಚಾರ ತಿಳಿದು ಅವರ ಮನೆ ಮುಂದೆ ಕಾರ್ಯಕರ್ತರು ಜಮಾಯಿಸಲಾರಂಬಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.