ADVERTISEMENT

ಬೆಂಗಳೂರು-ಮಂಗಳೂರು ಹೈಸ್ಪೀಡ್ ಕಾರಿಡಾರ್‌ಗೆ ಡಿಪಿಆರ್: ಬ್ರಿಜೇಶ್ ಚೌಟ

​ಪ್ರಜಾವಾಣಿ ವಾರ್ತೆ
Published 11 ಜೂನ್ 2025, 3:52 IST
Last Updated 11 ಜೂನ್ 2025, 3:52 IST
<div class="paragraphs"><p>ಬ್ರಿಜೇಶ್ ಚೌಟ</p></div>

ಬ್ರಿಜೇಶ್ ಚೌಟ

   

ಮಂಗಳೂರು: ಮಂಗಳೂರು-ಬೆಂಗಳೂರು ನಡುವೆ  'ಹೈಸ್ಪೀಡ್‌ ಎಕ್ಸ್‌ಪ್ರೆಸ್‌ ಕಾರಿಡಾರ್‌' ಯೋಜನೆಗೆ ಕಂದ್ರ ಭೂಸಾರಿಗೆ ಇಲಾಖೆಯು ವಿಸ್ತೃತ ಯೋಜನಾ ವರದಿ (ಡಿಪಿಆರ್‌) ತಯಾರಿಸಲಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ತಿಳಿಸಿದ್ದಾರೆ.

‘ದಕ್ಷಿಣ ಕನ್ನಡ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪೂರಕವಾಗಿರುವ ಈ ಮಹತ್ವಾಕಾಂಕ್ಷೆಯ ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿ ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಮನವಿ ಸಲ್ಲಿಸಿದ್ದೆ. ಅದಕ್ಕೆ ಪ್ರತಿಕ್ರಿಯಿಸಿರುವ ಅವರು ಈ ಯೋಜನೆಯ  ಡಿಪಿಆರ್ ಸಿದ್ಧಪಡಿಸುವುದಕ್ಕೆ ಕಳೆದ 2025ರ ಏ.30ರಂದು ಗುತ್ತಿಗೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.’ 

ADVERTISEMENT

'ಈ ಹೈಸ್ಪೀಡ್‌ ಎಕ್ಸ್‌ಪ್ರೆಸ್‌ ಹೆದ್ದಾರಿಯು ನಾಲ್ಕರಿಂದ ಎಂಟು ಪಥಗಳನ್ನು ಹೊಂದುವ ನಿರೀಕ್ಷೆಯಿದೆ. ಇದು ಮಂಗಳೂರು-ಬೆಂಗಳೂರು ನಡುವಿನ ಪ್ರಯಾಣದ ಅವಧಿಯನ್ನು ಗಣನೀಯವಾಗಿ  ಕಡಿಮೆಗೊಳಿಸಲಿದೆ. ನವಮಂಗಳೂರು ಬಂದರಿನ ವಹಿವಾಟಿಗೆ,  ಜಿಲ್ಲೆಯ ಪ್ರವಾಸೋದ್ಯಮಕ್ಕೆ, ವ್ಯಾಪಾರ - ವಾಣಿಜ್ಯ ಚಟುವಟಿಕೆ ಅಭಿವೃದ್ಧಿಗೆ  ಅನುಕೂಲವಾಗಲಿದೆ.’ 

‘ಶಿರಾಡಿ ಘಾಟಿಯಲ್ಲಿ ಪ್ರತ್ಯೇಕ ರೈಲು ಮಾರ್ಗ ನಿರ್ಮಿಸಲು ರೈಲ್ವೆ ಇಲಾಖೆ ಡಿಪಿಆರ್ ಸಿದ್ದಪಡಿಸಲು ಮುಂದಾಗಿದೆ.  ಇಲ್ಲಿ ರಸ್ತೆ ಮತ್ತು ರೈಲು ಮಾರ್ಗವನ್ನು ಸಮಾನಾಂತರವಾಗಿ ಅಭಿವೃದ್ದಿಸುವ ಸಾಧ್ಯತೆಗಳ ಬಗ್ಗೆ ಅನ್ವೇಷಿಸಲು ರೈಲ್ವೆ ಮಂಡಳಿ ಮತ್ತು ಎನ್‌ಎಚ್ಎಐ ಅಧಿಕಾರಿಗಳನ್ನು ಒಳಗೊಂಡ ಜಂಟಿ ಸಮಿತಿಯನ್ನು ರಚಿಸುವಂತೆ ಕೋರಿದ್ದೇನೆ’ ಎಂದು ಎಂದು ಕ್ಯಾ. ಚೌಟ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.