ಮಂಗಳೂರು: ನಗರ ಬಿಕರ್ನಕಟ್ಟೆಯ ಬಾಲಯೇಸು ಪುಣ್ಯ ಕ್ಷೇತ್ರದಲ್ಲಿ ವಾರ್ಷಿಕ ಮಹೋತ್ಸವದ ಅಂಗವಾಗಿ ಮಂಗಳವಾರ ಬೆಳಿಗ್ಗೆಯಿಂದ ವಿಶೇಷ ಪ್ರಾರ್ಥನಾ ವಿಧಿಗಳು ನೆರವೇರಿದವು. ಸಾವಿರಾರು ಭಕ್ತರು ಪುಣ್ಯಕ್ಷೇತ್ರಕ್ಕೆ ಭೇಟಿ ನೀಡಿ ವಾರ್ಷಿಕೋತ್ಸವದ ಸಂಭ್ರಮದಲ್ಲಿ ಭಾಗಿಯಾದರು.
ಬಳ್ಳಾರಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಫಾ.ಹೆನ್ರಿ ಡಿಸೋಜ, ಮಂಗಳೂರು ಧರ್ಮಪ್ರಾಂತ್ಯದ ನಿವೃತ್ತ ಧರ್ಮಾಧ್ಯಕ್ಷ ಫಾ.ಅಲೋಶಿಯಸ್ ಪಾವ್ಲ್ ಡಿಸೋಜ, ಝಾನ್ಸಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಫಾ.ವಿಲ್ಫ್ರೆಡ್ ಗ್ರೆಗೊರಿ ಮೊರಾಸ್ ಅವರು ವಿಶೇಷ ಪ್ರಾರ್ಥನೆಗಳನ್ನು ನಡೆಸಿಕೊಟ್ಟರು.
ಕೊಂಕಣಿ, ಇಂಗ್ಲಿಷ್ ಹಾಗೂ ಕನ್ನಡ ಭಾಷೆಗಳಲ್ಲಿ ಬಲಿಪೂಜೆಗಳು ನೆರವೇರಿದವು. ಬೆಳಿಗ್ಗೆ 10.30ಕ್ಕೆ ಮಕ್ಕಳಿಗಾಗಿ ವಿಶೇಷ ಬಲಿಪೂಜೆಯನ್ನು ಧರ್ಮಗುರುಗಳು ನೆರವೇರಿಸಿದರು. ಜಿಲ್ಲೆಯ ಹಾಗೂ ಹೊರ ಜಿಲ್ಲೆಯ ವಿವಿಧ ಕಡೆಗಳಿಂದ ಬಂದಿದ್ದ ಭಕ್ತರು ಬಲಿ ಪೂಜೆಗಳಲ್ಲಿ ಭಾಗವಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.