ಮಂಗಳೂರು: ಬಿಕರ್ನಕಟ್ಟೆ–ಸಾಣೂರು ರಾಷ್ಟ್ರೀಯ ಹೆದ್ದಾರಿ 169 ಕಾಮಗಾರಿ ಪ್ರಾರಂಭಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ‘ಸಾಣೂರು ಬಿಕರ್ನಕಟ್ಟೆ ಹೈವೇಸ್ ಲಿಮಿಟೆಡ್’ ಸಂಸ್ಥೆಗೆ ಅಕ್ಟೋಬರ್ 10ರಂದು ಕಾರ್ಯಾದೇಶ ನೀಡಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.
ಭೂಸ್ವಾಧೀನ ವೆಚ್ಚ ಹೊರತುಪಡಿಸಿ ಸುಮಾರು ₹1,137 ಕೋಟಿ ವೆಚ್ಚದಲ್ಲಿ ಈ ಹೆದ್ದಾರಿ ನಿರ್ಮಾಣವಾಗಲಿದೆ. ಕಾರ್ಯಾದೇಶ ಪಡೆದಿರುವ ಕಂಪನಿಯು ರಸ್ತೆ ಕಾಮಗಾರಿಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಿಗದಿ ಪಡಿಸಿದ ಅವಧಿಯೊಳಗೆ ಪೂರ್ಣಗೊಳಿಸಬೇಕಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಭಾರತಮಾಲಾ ಪರಿಯೋಜನೆ ಪ್ಯಾಕೇಜ್ 3ರ ಅಡಿಯಲ್ಲಿ ಈ ಹೆದ್ದಾರಿಯನ್ನು ನಿರ್ಮಿಸಲಾಗುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.