ಉಜಿರೆ: ಚಾರ್ಮಾಡಿ ಘಾಟಿಯ ಮೂರನೇ ತಿರುವಿನಲ್ಲಿ ಭಾನುವಾರ ತಡರಾತ್ರಿ ಕಾರು ಮತ್ತು ಲಾರಿ ಡಿಕ್ಕಿಯಾಗಿ ನಾಲ್ಕು ಮಂದಿಗೆ ಗಂಭೀರ ಗಾಯಗಳಾಗಿವೆ.
ಮೂಡಿಗೆರೆಯಿಂದ ಉಜಿರೆ ಕಡೆಗೆ ಬರುತ್ತಿದ್ದ ಕಾರು ಮತ್ತು ಕೊಟ್ಟಿಗೆಹಾರದ ಕಡೆ ಹೋಗುತ್ತಿದ್ದ ಲಾರಿ ಅಪಘಾತಕ್ಕೀಡಾಗಿದ್ದು, ಕಾರಿನಲ್ಲಿದ್ದ ಹಂಪಿಯ ವೇದಮ್ಮ, ಜ್ಞಾನಮ್ಮ, ಮಂಜುಳಾ ಮತ್ತು ರೇಣುಕಾ ಅವರಿಗೆ ಗಂಭೀರ ಗಾಯಗಳಾಗಿದೆ. ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಚೇತರಿಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.