ADVERTISEMENT

ಸುಬ್ರಹ್ಮಣ್ಯ | ಅಡ್ಡಾದಿಡ್ಡಿ ಬೈಕ್ ಓಡಿಸಿ ಬಸ್ ಸಂಚಾರಕ್ಕೆ ಅಡ್ಡಿ: ಪ್ರಕರಣ

​ಪ್ರಜಾವಾಣಿ ವಾರ್ತೆ
Published 27 ಜುಲೈ 2025, 5:33 IST
Last Updated 27 ಜುಲೈ 2025, 5:33 IST
ಅಡ್ಡಾದಿಡ್ಡಿ ಬೈಕ್ ಚಲಾಯಿಸಿದ ಯುವಕರು
ಅಡ್ಡಾದಿಡ್ಡಿ ಬೈಕ್ ಚಲಾಯಿಸಿದ ಯುವಕರು   

ಸುಬ್ರಹ್ಮಣ್ಯ: ಕೆಎಸ್‌ಆರ್‌ಟಿಸಿ ಬಸ್‌ನ ಎದುರು ಅಡ್ಡಾದಿಡ್ಡಿ ಬೈಕ್ ಚಲಾಯಿಸಿ ಬಸ್ ಸಂಚಾರಕ್ಕೆ ಅಡ್ಡಿಪಡಿಸಿದ ಆರೋಪ ವ್ಯಕ್ತವಾಗಿದ್ದು, ಈ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶುಕ್ರವಾರ ಬಳ್ಪದಿಂದ ಸುಬ್ರಹ್ಮಣ್ಯಕ್ಕೆ ಬರುವಾಗ ಘಟನೆ ನಡೆದಿದ್ದು, ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿತ್ತು. ಬಸ್ ಸಂಚಾರಕ್ಕೆ ಅಡ್ಡಿಪಡಿಸಿದ ಹಾಗೂ ನಿಯಮ ಪಾಲಿಸದೆ ಬೈಕ್ ಚಲಾಯಿಸಿದ ಬಗ್ಗೆ ಆಕ್ರೋಶ ವ್ಯಕ್ತವಾಗಿತ್ತು.

ಘಟನೆ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಯುವಕರ ವಿರುದ್ಧ ಪ್ರಕರಣ ದಾಖಲಾಗಿದ್ದು, ಯುವಕರನ್ನು ಪತ್ತೆ ಹಚ್ಚಿ ಠಾಣೆಗೆ ಕರೆಸಿ ದಂಡ ವಿಧಿಸಲಾಗಿದೆ ಎಂದು ತಿಳಿದುಬಂದಿದೆ. ಆರೋಪಿತ ಯುವಕರು ಗುತ್ತಿಗಾರು ಹಾಗೂ ಏನೆಕಲ್‌ನವರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.