ADVERTISEMENT

ಕಲ್ಮಂಜದಲ್ಲಿ ಹದ್ದುಗಳ ಸಾವು: ಹಕ್ಕಿಜ್ವರದ ಶಂಕೆ

ಕೇರಳದ ಕುಕ್ಕುಟ ಸಾಗಣೆಗೆ ನಿರ್ಬಂಧ

​ಪ್ರಜಾವಾಣಿ ವಾರ್ತೆ
Published 8 ಜನವರಿ 2021, 21:48 IST
Last Updated 8 ಜನವರಿ 2021, 21:48 IST

ಮಂಗಳೂರು: ಬೆಳ್ತಂಗಡಿ ತಾಲ್ಲೂಕಿನ ಕಲ್ಮಂಜ ಗ್ರಾಮದ ನಿಡ್ಗಲ್ ಬಳಿ ಮಜಲು ಎಂಬಲ್ಲಿ ಶುಕ್ರವಾರ ಸತ್ತು ಬಿದ್ದ ಎರಡು ಹದ್ದುಗಳು ಪತ್ತೆಯಾಗಿದ್ದು, ಹಕ್ಕಿಜ್ವರದ ಆತಂಕ ಎದುರಾಗಿದೆ.

ಗೋಪಾಲ ಮಡಿವಾಳ ಮತ್ತು ಶೇಖರ ಮಡವಾಳ ಅವರ ಗದ್ದೆಯಲ್ಲಿ ಹದ್ದುಗಳು ಕೊಳೆತ ಸ್ಥಿತಿಯಲ್ಲಿ ಕಂಡು ಬಂದಿವೆ. 3 ದಿನಗಳ ಹಿಂದೆ ಎರಡು ಹದ್ದುಗಳು ಸತ್ತಿರಬಹುದು. ಸಂಪೂರ್ಣ ಕೊಳೆತ ಸ್ಥಿತಿಯಲ್ಲಿದ್ದು, ಪರೀಕ್ಷೆಗೆ ಮಾದರಿ ಸಂಗ್ರಹಿಸಲು ಅಸಾಧ್ಯವಾಗಿದೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಕಲಾಮಧು ತಿಳಿಸಿದ್ದಾರೆ.

‘ತೆಂಗಿನ ಮರಗಳಲ್ಲಿ ಹದ್ದುಗಳು ಗೂಡು ಕಟ್ಟಿರುವುದರಿಂದ ಈ ಪ್ರದೇಶದಲ್ಲಿ ಹೆಚ್ಚಾಗಿ ವಾಸಿಸುತ್ತಿವೆ. ಹಕ್ಕಿಜ್ವರದಿಂದ ಸತ್ತಿವೆಯೋ ಅಥವಾ ಘರ್ಷಣೆಯಿಂದ ಮೃತಪಟ್ಟಿವೆಯೋ ಎಂಬುದನ್ನು ಪತ್ತೆ ಮಾಡಬೇಕಾಗಿದೆ. ಸಮೀಪದ 25 ಮನೆಗಳಿಗೆ ಎಚ್ಚರಿಕೆ ನೀಡಲಾಗಿದೆ. ಮನೆ ಮಂದಿಯಲ್ಲಿ ಜ್ವರದ ಲಕ್ಷಣ ಇದೆಯೇ ಎಂಬುದನ್ನು ಪರೀಕ್ಷಿಸಲಾಗುವುದು’ ಎಂದು ಹೇಳಿದ್ದಾರೆ.

ADVERTISEMENT

ಕೇರಳ ಕುಕ್ಕುಟ ನಿರ್ಬಂಧ: ಪಕ್ಕದ ಕೇರಳದಲ್ಲಿ ಹಕ್ಕಿಜ್ವರ ಖಚಿತವಾಗಿದ್ದು, ಅಲ್ಲಿಂದ ಜಿಲ್ಲೆಗೆ ಬರುವ ಕುಕ್ಕುಟ ಮತ್ತು ಕುಕ್ಕುಟ ಉತ್ಪನ್ನಗಳಿಗೆ ನಿರ್ಬಂಧ ವಿಧಿಸುವಂತೆ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.

ಜಿಲ್ಲೆಯಿಂದ ಸಾಗಿರುವ ಕುಕ್ಕಟ ಮತ್ತು ಕುಕ್ಕುಟ ಉತ್ಪನ್ನಗಳ ವಾಹನಗಳನ್ನು ಗಡಿಭಾಗದಲ್ಲಿ ರಾಸಾಯನಿಕಗಳಿಂದ ಸ್ವಚ್ಛಗೊಳಿಸಬೇಕು ಎಂದು ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.