ADVERTISEMENT

ಮಂಗಳೂರು ವಿವಿ ಕನ್ನಡ ವಿಭಾಗದಲ್ಲಿ ‘ಬಿತ್ತಿ’ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 1 ಜುಲೈ 2025, 15:26 IST
Last Updated 1 ಜುಲೈ 2025, 15:26 IST
ಮಂಗಳೂರು ವಿವಿಯ ಎಸ್‌ವಿಪಿ ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಪತ್ರಿಕಾ ದಿನಾಚರಣೆ ಅಂಗವಾಗಿ  ಹಮ್ಮಿಕೊಂಡಿದ್ದ ಬಿತ್ತಿ ಗೋಡೆ ಬರಹ ಪತ್ರಿಕೆಯ ವಾರ್ಷಿಕ ಸಂಚಿಕೆ ಬಿಡುಗಡೆ ಮಾಡಲಾಯಿತು
ಮಂಗಳೂರು ವಿವಿಯ ಎಸ್‌ವಿಪಿ ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಪತ್ರಿಕಾ ದಿನಾಚರಣೆ ಅಂಗವಾಗಿ  ಹಮ್ಮಿಕೊಂಡಿದ್ದ ಬಿತ್ತಿ ಗೋಡೆ ಬರಹ ಪತ್ರಿಕೆಯ ವಾರ್ಷಿಕ ಸಂಚಿಕೆ ಬಿಡುಗಡೆ ಮಾಡಲಾಯಿತು   

ಉಳ್ಳಾಲ: ಮಂಗಳೂರು ವಿವಿಯ ಎಸ್‌ವಿಪಿ ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಪತ್ರಿಕಾ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ‘ಬಿತ್ತಿ’ ಗೋಡೆ ಬರಹ ಪತ್ರಿಕೆಯ ದಿನಾಚರಣೆ ನಡೆಯಿತು.

ಕಾವೂರು ಬಿಜಿಎಸ್‌ ಕಾಲೇಜಿನ ಪ್ರಾಂಶುಪಾಲ ಸುಬ್ರಹ್ಮಣ್ಯ ಸಿ.ಕುಂಜೂರು ಅವರು ಸಂಚಿಕೆ ಬಿಡುಗಡೆ ಮಾಡಿದರು.

ಕನ್ನಡ ವಿಭಾಗದ ಪ್ರಾಧ್ಯಾಪಕರಾದ ಸೋಮಣ್ಣ ಹೊಂಗಳ್ಳಿ, ಧನಂಜಯ ಕುಂಬ್ಳೆ, ಯಶುಕುಮಾರ್ ಮಾತನಾಡಿದರು.

ADVERTISEMENT

ಎಸ್‌ವಿಪಿ ಕನ್ನಡ ಅಧ್ಯಯನ ಸಂಸ್ಥೆಯ ಅಧ್ಯಕ್ಷ ನಾಗಪ್ಪ ಗೌಡ ಅಧ್ಯಕ್ಷತೆ ವಹಿಸಿದ್ದರು.

ದಿ.ಗುಂಡ್ಮಿ ಚಂದ್ರಶೇಖರ ಐತಾಳ ನೆನಪಿನ ಬಹುಭಾಷಾ ಕವಿಗೋಷ್ಠಿಯಲ್ಲಿ ವಿದ್ಯಾರ್ಥಿಗಳು ಕವಿತಾ ವಾಚನ ಮಾಡಿದರು. ಕನ್ನಡ ಸ್ನಾತಕೋತ್ತರ ಪದವಿಯಲ್ಲಿ ಪ್ರಥಮ ರ್‍ಯಾಂಕ್ ಪಡೆದ ವೀಕ್ಷಿತಾ ಅವರನ್ನು ಸನ್ಮಾನಿಸಲಾಯಿತು. ಬರವಣಿಗೆ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಬಿತ್ತಿ ಸಂಪಾದಕಿ ಸಂಧ್ಯಾ ಎನ್.ಸ್ವಾಗತಿಸಿದರು. ಉಪ ಸಂಪಾದಕಿ ಪ್ರತೀಕ್ಷಾ ವಂದಿಸಿದರು. ಸೌಮ್ಯಾ ಪಿ.ಪಿ. ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.