ADVERTISEMENT

ಮೇಲ್ಸೇತುವೆ ಕಾಮಗಾರಿ ಅಪೂರ್ಣ: ತಲಪಾಡಿಯಲ್ಲಿ ಬಿಜೆಪಿಯಿಂದ ಟೋಲ್ ನಿರಾಕರಣೆ ಚಳವಳಿ

ಪಂಪ್‌ವೆಲ್ ಮೇಲ್ಸೇತುವೆ ಕಾಮಗಾರಿ ಪೂರ್ಣಗೊಳಿಸದಿರುವುದಕ್ಕೆ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 1 ಜನವರಿ 2020, 5:21 IST
Last Updated 1 ಜನವರಿ 2020, 5:21 IST
ಮಂಗಳೂರು ಸಮೀಪದ ತಲಪಾಡಿಯಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟಿಸಿದರು.
ಮಂಗಳೂರು ಸಮೀಪದ ತಲಪಾಡಿಯಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟಿಸಿದರು.   

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66ರಪಂಪ್‌ವೆಲ್ ಮೇಲ್ಸೇತುವೆ ಕಾಮಗಾರಿಯನ್ನು ನಿಗದಿತ ಗಡುವಿನಂತೆ ಪೂರ್ಣಗೊಳಿಸದಿರುವುದನ್ನು ವಿರೋಧಿಸಿ ಇಲ್ಲಿನ ಕೇರಳ ಗಡಿಯಲ್ಲಿರುವ ತಲಪಾಡಿ ಟೋಲ್ ಗೇಟ್‌ನಲ್ಲಿ ಬಿಜೆಪಿ ಶಾಸಕರ ನೇತೃತ್ವದಲ್ಲಿ ಟೋಲ್ ನಿರಾಕರಣೆ ಚಳವಳಿ ನಡೆಸಲಾಯಿತು.

ಶಾಸಕರಾದ ಡಿ.ವೇದವ್ಯಾಸ ಕಾಮತ್ ಮತ್ತು ಡಾ.ವೈ.ಭರತ್ ಶೆಟ್ಟಿ ಪ್ರತಿಭಟನೆಯ ನೇತೃತ್ವ ವಹಿಸಿದ್ದಾರೆ. ಪಂಪ್‌ವೆಲ್ ಮೇಲ್ಸೇತುವೆ ಕಾಮಗಾರಿ ಪೂರ್ಣಗೊಳ್ಳುವವರೆಗೂ ವಾಹನ ಸವಾರರಿಂದ ಟೋಲ್ ಸಂಗ್ರಹಿಸದಂತೆ ಪ್ರತಿಭಟನಾಕಾರರು ಪಟ್ಟು ಹಿಡಿದಿದ್ದಾರೆ.

ಸದ್ಯ ಕೇರಳ ಮತ್ತು ಮಂಗಳೂರು ನಡುವೆ ಸಂಚರಿಸುತ್ತಿರುವ ವಾಹನಗಳಿಂದ ಟೋಲ್ ಸಂಗ್ರಹಿಸುವುದನ್ನು ಸ್ಥಗಿತಗೊಳಿಸಲಾಗಿದೆ. ವಾಹನ ಸವಾರರು ಟೋಲ್ ಪಾವತಿಸದೇ ಸಂಚರಿಸುತ್ತಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.