ADVERTISEMENT

ಕಿಯೋನಿಕ್ಸ್‌ ಅಧ್ಯಕ್ಷರಾಗಿ ಹರಿಕೃಷ್ಣ ಬಂಟ್ವಾಳ ನೇಮಕ

​ಪ್ರಜಾವಾಣಿ ವಾರ್ತೆ
Published 13 ಜೂನ್ 2020, 16:15 IST
Last Updated 13 ಜೂನ್ 2020, 16:15 IST
ಹರಿಕೃಷ್ಣ ಬಂಟ್ವಾಳ
ಹರಿಕೃಷ್ಣ ಬಂಟ್ವಾಳ   

ಮಂಗಳೂರು: ಬಿಜೆಪಿ ಮುಖಂಡ, ಬಿಲ್ಲವ ಸಮಾಜ ನಾಯಕ ಕೆ.ಹರಿಕೃಷ್ಣ ಬಂಟ್ವಾಳ ಅವರನ್ನು ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ (ಕಿಯೋನಿಕ್ಸ್)ದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ವಿದ್ಯುನ್ಮಾನ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಧೀನ ಕಾರ್ಯದರ್ಶಿ ಸಿದ್ರಾಮಪ್ಪ ತಳವಾರ ಅವರು ಸರ್ಕಾರದ ಪರವಾಗಿ ಆದೇಶ ಹೊರಡಿಸಿದ್ದು, ಇದೇ 12ರಿಂದಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

ಸುದೀರ್ಘ ರಾಜಕೀಯ ಇತಿಹಾಸ ಹೊಂದಿರುವ ಕೆ.ಹರಿಕೃಷ್ಣ ಬಂಟ್ವಾಳ್ ಅವರು ಕಳೆದ ವಿಧಾನಸಭಾ ಚುನಾವಣೆ ವೇಳೆ ರಾಜೇಶ್ ನಾಯ್ಕ್ ಅವರು ಬಂಟ್ವಾಳ ಕ್ಷೇತ್ರದಲ್ಲಿ ಗೆಲುವು ಸಾಧಿಸುವಲ್ಲಿ ಮಹತ್ತರ ಪಾತ್ರ ವಹಿಸಿದ್ದರು. ಬಳಿಕ ಬಿಜೆಪಿಯಲ್ಲಿ ಜಿಲ್ಲಾ ಮಟ್ಟದ ಹುದ್ದೆಗಳನ್ನು ಅಲಂಕರಿಸಿದ ಹರಿಕೃಷ್ಣ ಬಂಟ್ವಾಳ ಅವರಿಗೆ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ನಿಗಮ ಹುದ್ದೆ ನೀಡಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.