ಸುಹಾಸ್ ಶೆಟ್ಟಿ
ಮಂಗಳೂರು: ಬಜಪೆಯಲ್ಲಿ ಹತ್ಯೆಗೀಡಾದ ಸುಹಾಸ್ ಶೆಟ್ಟಿ ಕುಟುಂಬಕ್ಕೆ ಬಿಜೆಪಿ ರಾಜ್ಯ ಘಟಕದಿಂದ ₹ 25 ಲಕ್ಷದ ಠೇವಣಿ ಪತ್ರವನ್ನು ಸುಹಾಸ್ ತಂದೆ ಮೋಹನ್ ಮತ್ತು ತಾಯಿ ಸುಲೋಚನಾ ಅವರಿಗೆ ಪಕ್ಷದ ಮುಖಂಡರು ಬುಧವಾರ ಹಸ್ತಾಂತರಿಸಿದರು.
ಸುಹಾಸ್ ಅಂತ್ಯಸಂಸ್ಕಾರದ ಸಂದರ್ಭದಲ್ಲಿ ಅವರ ಮನೆಗೆ ಭೇಟಿ ನೀಡಿದ್ದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ ಅವರು, ಪಕ್ಷದ ವತಿಯಿಂದ ಸಂತ್ರಸ್ತ ಕುಟುಂಬಕ್ಕೆ ₹ 25 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದ್ದರು.
ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಸುಹಾಸ್ ಶೆಟ್ಟಿ ಪಾಲಕರಿಗೆ ಠೇವಣಿ ಪತ್ರವನ್ನು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಸತೀಶ್ ಕುಂಪಲ, ಸಂಸದ ಕ್ಯಾ.ಬ್ರಿಜೇಶ್ ಚೌಟ ಹಾಗೂ ಬಿಜೆಪಿ ಶಾಸಕರು ಹಸ್ತಾಂತರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.