ADVERTISEMENT

ಬಿಜೆಪಿ ಅಧ್ಯಕ್ಷ ನಳಿನ್‌ಗೆ ಅನಾರೋಗ್ಯ: ಆರೋಗ್ಯ ವಿಚಾರಿಸಿದ ಸಿಎಂ

​ಪ್ರಜಾವಾಣಿ ವಾರ್ತೆ
Published 19 ನವೆಂಬರ್ 2022, 7:05 IST
Last Updated 19 ನವೆಂಬರ್ 2022, 7:05 IST
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅನಾರೋಗ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಶನಿವಾರ ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಸಚಿವ ಎಸ್.ಅಂಗಾರ, ಸಂಸದ ಡಿ.ವಿ.ಸದಾನಂದ ಗೌಡ ಹಾಗೂ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಜೊತೆಯಲ್ಲಿದ್ದರು‌

ಮಂಗಳೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅನಾರೋಗ್ಯಕ್ಕೀಡಾಗಿದ್ದು, ಇಲ್ಲಿಯ ಎ.ಜೆ. ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯಗೌಡರ ಕಂಚಿನ ಪ್ರತಿಮೆ ಅನಾವರಣ ಸಮಾರಂಭದಲ್ಲಿ ಪಾಲ್ಗೊಳ್ಳಲು ಶನಿವಾರ ಮಂಗಳೂರಿಗೆ ಬಂದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆಸ್ಪತ್ರೆಗೆ ತೆರಳಿ ನಳಿನ್ ಕುಮಾರ್ ಕಟೀಲ್ ಅವರ ಆರೋಗ್ಯ ವಿಚಾರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT