ADVERTISEMENT

ನಳಿನ್ ಜೊತೆ ಯತ್ನಾಳ್‌: ಫೋಟೊ ವೈರಲ್‌

​ಪ್ರಜಾವಾಣಿ ವಾರ್ತೆ
Published 12 ಮಾರ್ಚ್ 2021, 4:41 IST
Last Updated 12 ಮಾರ್ಚ್ 2021, 4:41 IST
ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಮತ್ತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌
ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಮತ್ತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌   

ಮಂಗಳೂರು: ವಿಧಾನ ಪರಿಷತ್ ಸದಸ್ಯ ಬಸವನಗೌಡ ಪಾಟೀಲ ಯತ್ನಾಳ್ ಹಾಗೂ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್ ಕಟೀಲ್ ಬೆಂಗಳೂರಿನಿಂದ ನಗರಕ್ಕೆ ಬುಧವಾರ ಜೊತೆಯಾಗಿ ಬಂದಿರುವ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಬಸವನಗೌಡ ಪಾಟೀಲ ಯತ್ನಾಳ್ ಬಳಿಕ ಧರ್ಮಸ್ಥಳಕ್ಕೆ ತೆರಳಿದ್ದಾರೆ. ಯತ್ನಾಳ್‌ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಪಕ್ಷದ ಶಿಸ್ತು ಸಮಿತಿಗೆ ಶಿಫಾರಸು ಆಗಿತ್ತು. ಹೀಗಾಗಿ, ಅವರು ಅಧ್ಯಕ್ಷರ ಜೊತೆ ಬಂದಿರುವುದು ಕುತೂಹಲ ಮೂಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT