ADVERTISEMENT

ವಿರೋಧ ಬಿಟ್ಟು ಬೇರೆ ಗೊತ್ತಿಲ್ಲ: ಕಾಂಗ್ರೆಸ್‌ ವಿರುದ್ಧ ನಳಿನ್ ಕುಮಾರ್ ಕಟೀಲ್

​ಪ್ರಜಾವಾಣಿ ವಾರ್ತೆ
Published 12 ಜೂನ್ 2021, 3:32 IST
Last Updated 12 ಜೂನ್ 2021, 3:32 IST
ನಳಿನ್‌ಕುಮಾರ್ ಕಟೀಲ್‌
ನಳಿನ್‌ಕುಮಾರ್ ಕಟೀಲ್‌   

ಪುತ್ತೂರು: ‘ಕಾಂಗ್ರೆಸ್ ಪಕ್ಷಕ್ಕೆ ವಿರೋಧ ಮಾಡುವುದು ಬಿಟ್ಟು, ಬೇರೆ ವಿಷಯವೇ ಗೊತ್ತಿಲ್ಲ. ದೇಶದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕಾಂಗ್ರೆಸ್ ಪಕ್ಷ ಎಲ್ಲದಕ್ಕೂ ವಿರೋಧ ಮಾಡುತ್ತಲೇ ಬಂದಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.

ಶುಕ್ರವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೋವಿಡ್ ಲಸಿಕೆ ವಿಚಾರದಲ್ಲಿ ವಿರೋಧ ವ್ಯಕ್ತಪಡಿಸಿದ್ದ ಕಾಂಗ್ರೆಸ್, ಈಗ ಪೆಟ್ರೋಲ್, ಡೀಸೆಲ್ ವಿಚಾರದಲ್ಲಿ ರಾಜಕೀಯ ಮಾಡುತ್ತಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಏರಿಕೆಯಾದ ಕಾರಣ ದೇಶದಲ್ಲೂ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಬೇಕಾಗಿದೆ. ಈ ಬೆಳವಣಿಗೆ ಯಾವುದೇ ಪಕ್ಷ ಆಡಳಿತದಲ್ಲಿದ್ದರೂ ನಡೆದುಕೊಂಡು ಬಂದಿದೆ. ಕೋವಿಡ್ ಸಂಕಷ್ಟದ ದಿನಗಳಲ್ಲಿ ದೇಶದ ಆರ್ಥಿಕ ಪರಿಸ್ಥಿತಿ ಕುಸಿಯದಂತೆ ಹಾಗೂ ದೇಶದ ಜನತೆಯ ಹಿತದೃಷ್ಟಿಯಿಂದ ಕೇಂದ್ರ ಹಲವು ನಿರ್ಧಾರಗಳನ್ನು ಕೈಗೊಂಡಿದ್ದು, ಬೆಲೆ ಇಳಿಕೆಯ ಬಗ್ಗೆಯೂ ಶೀಘ್ರವೇ ನಿರ್ಧಾರ ತೆಗೆದುಕೊಳ್ಳಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT