ADVERTISEMENT

ಮಂಗಳೂರು: ನುಡಿದಂತೆ ನಡೆದ ಕೇಂದ್ರ ಸರ್ಕಾರ

ಬಿಜೆಪಿ ಜನಸಂವಾದ ರ‍್ಯಾಲಿಯಲ್ಲಿ ಭಾನುಪ್ರಕಾಶ್‌

​ಪ್ರಜಾವಾಣಿ ವಾರ್ತೆ
Published 27 ಜೂನ್ 2020, 17:18 IST
Last Updated 27 ಜೂನ್ 2020, 17:18 IST
ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ಶನಿವಾರ ಜಿಲ್ಲಾ ಜನಸಂವಾದ ರ‍್ಯಾಲಿ ನಡೆಯಿತು
ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ಶನಿವಾರ ಜಿಲ್ಲಾ ಜನಸಂವಾದ ರ‍್ಯಾಲಿ ನಡೆಯಿತು   

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ 2 ನೇ ಅವಧಿಯ ಒಂದನೇ ವರ್ಷಾಚರಣೆ ಪ್ರಯುಕ್ತ ಮೋದಿಯವರ ಸಾಧನೆಗಳನ್ನು ಜಿಲ್ಲೆಯ ಜನತೆಗೆ ತಿಳಿಸಲು ಬಿಜೆಪಿ ಜಿಲ್ಲಾ ಘಟಕದಿಂದ ಜಿಲ್ಲಾ ಜನಸಂವಾದ ವರ್ಚುವ್ಯಲ್ ರ‍್ಯಾಲಿಯನ್ನು ಶನಿವಾರ ನಗರದ ಬಿಜೆಪಿ ಕಚೇರಿಯಲ್ಲಿ ಆಯೋಜಿಸಲಾಗಿತ್ತು.

ವೆಬೆಕ್ಸ್ ಮೀಟಿಂಗ್ ಆ್ಯಪ್‌ ಉಪಯೋಗಿಸಿಕೊಂಡು ನಡೆಸಿದ ಈ ಜನಸಂವಾದ ರ‍್ಯಾಲಿಯಲ್ಲಿ ರಾಜ್ಯ ಘಟಕದ ಉಪಾಧ್ಯಕ್ಷ ಎಂ.ಬಿ. ಭಾನುಪ್ರಕಾಶ್ ಮಾತನಾಡಿದರು.

‘ತ್ರಿವಳಿ ತಲಾಖ್ ರದ್ದತಿ, ಪೌರತ್ವ ತಿದ್ದುಪಡಿ ಕಾಯ್ದೆ, 370 ನೇ ವಿಧಿ ರದ್ದತಿ, ರಾಮಮಂದಿರ ನಿರ್ಮಾಣಕ್ಕೆ ಚಾಲನೆ ಮುಂತಾದ ಐತಿಹಾಸಿಕ ನಿರ್ಧಾರಗಳನ್ನು ಕೇಂದ್ರ ಸರ್ಕಾರ ಕೈಗೊಂಡಿದೆ. ‘ನುಡಿದಂತೆ ನಡೆದವನ ಅಡಿಗೆನ್ನ ನಮನ’ ಎನ್ನುವಂತೆ ಚುನಾವಣೆಯ ಸಂದರ್ಭದಲ್ಲಿ ಕೊಟ್ಟ ಮಾತಿನಂತೆ ನಮ್ಮ ಸರ್ಕಾರ ನಡೆದು ಕೊಂಡಿದೆ’ ಎಂದರು.

ADVERTISEMENT

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಘಟಕದ ಅಧ್ಯಕ್ಷ ಸುದರ್ಶನ ಮೂಡುಬಿದಿರೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ ಅತಿಥಿಗಳಾಗಿ ಭಾಗವಹಿಸಿದ್ದರು. ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ ಸ್ವಾಗತಿಸಿದರು. ಕಾರ್ಯದರ್ಶಿ ಪೂಜಾ ಪೈ ಗೀತೆ ಹಾಡಿದರು. ಪ್ರಧಾನ ಕಾರ್ಯದರ್ಶಿ ಸುಧೀರ್ ಶೆಟ್ಟಿ ಕಣ್ಣೂರು ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.