ADVERTISEMENT

ಪ್ರವೀಣ್ ಮನೆಗೆ ಭೇಟಿ ನೀಡಿದ ನಳಿನ್, ಧಿಕ್ಕಾರ ಕೂಗಿದ ಪಕ್ಷದ ಕಾರ್ಯಕರ್ತರು

​ಪ್ರಜಾವಾಣಿ ವಾರ್ತೆ
Published 27 ಜುಲೈ 2022, 9:57 IST
Last Updated 27 ಜುಲೈ 2022, 9:57 IST
   

ಸುಳ್ಯ: ಹತ್ಯೆಗೊಳಗಾದ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಮನೆಗೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬುಧವಾರ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ನಳಿನ್ ಕುಮಾರ್ ಅವರಿಗೆ ಧಿಕ್ಕಾರ ಕೂಗಿದರು.

ರಾಜ್ಯ ಹಾಗೂ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇದ್ದರೂ ಪಕ್ಷದ ಕಾರ್ಯಕರ್ತನನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ ಏಕೆ ಎಂದು ಪ್ರಶ್ನಿಸಿದರು. ಪಕ್ಷದ ಅಮಾಯಕ ಕಾರ್ಯಕರ್ತನ ಸಾವಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.

ಬರ್ಬರವಾಗಿ ಕೊಲೆಗೀಡಾಗಿರುವ ಬಿಜೆಪಿ ಯುವಮೋರ್ಚಾದ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರ್ ಅವರ ಅಂತಿಮ‌ ದರ್ಶನಕ್ಕಾಗಿಬೆಳ್ಳಾರೆಗೆ ನಳಿನ್ ಕುಮಾರ್ ಕಟೀಲ್, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್‌ ಕುಮಾರ್ ಮತ್ತು ಪುತ್ತೂರು ಶಾಸಕ ಸಂಜೀವ ಮಠಂದೂರು ಒಟ್ಟಿಗೆ ಬಂದರು. ಅವರು ಕಾರಿನಿಂದ ಇಳಿಯುತ್ತಿದ್ದಂತೆಯೇ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು ನಳಿನ್‌ ಕುಮಾರ್ ಕಟೀಲ್ ಮತ್ತು ಬಿಜೆಪಿಗೆ ಧಿಕ್ಕಾರ ಕೂಗಿದರು. ಸಂಸದರು, ಸಚಿವರು ಮತ್ತು ಶಾಸಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು‌. ಸಂಘ ಪರಿವಾರಕ್ಕೆ ಸೇರಿದ ನೂರಾರು ಕಾರ್ಯಕರ್ತರು ಪ್ರವೀಣ್ ಅವರ ಅಂತಿಮ ದರ್ಶನಕ್ಕೆ ಅವರ ಮನೆಯಲ್ಲಿ ಸೇರಿದ್ದಾರೆ.

ADVERTISEMENT

ಇವನ್ನೂ ಓದಿ..

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.