ADVERTISEMENT

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮೂವರು ಪ್ರಮುಖ ಆರೋಪಿಗಳ‌ ಬಂಧನ

​ಪ್ರಜಾವಾಣಿ ವಾರ್ತೆ
Published 11 ಆಗಸ್ಟ್ 2022, 7:38 IST
Last Updated 11 ಆಗಸ್ಟ್ 2022, 7:38 IST
ಪ್ರವೀಣ್ ನೆಟ್ಟಾರು
ಪ್ರವೀಣ್ ನೆಟ್ಟಾರು    

ಮಂಗಳೂರು: ರಾಜ್ಯದಾದ್ಯಂತ ಸಂಚಲನ‌ ಮೂಡಿಸಿದ್ದ ಬಿಜೆಪಿ ಯುವ ಮುಖಂಡ ಸುಳ್ಯ ತಾಲ್ಲೂಕು ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಏಳು ಜನರನ್ನು ಬಂಧಿಸಲಾಗಿತ್ತು. ಈಗ ಇನ್ನೂ ಮೂವರನ್ನು ಗುರುವಾರ ಬೆಳಿಗ್ಗೆ ತಲಪಾಡಿ ಚೆಕ್ ಪೋಸ್ಟ್ ಬಳಿ ಬಂಧಿಸಲಾಗಿದೆ ಎಂದರು.

ಶಿಯಾಬುದ್ದೀನ್ ಅಲಿ, ರಿಯಾಝ್ ಅಂಕತಡ್ಕ, ಸುಬ್ರಹ್ಮಣ್ಯ ಸಮೀಪದ ಎಳಿಮಲೆ‌ ನಿವಾಸಿ ಬಶೀರ್ ಬಂಧಿತರು. ಬಂಧಿತರನ್ನು ನ್ಯಾಯಾಲಯದ ಎದುರು ಹಾಜರುಪಡಿಸಿ, ಪೊಲೀಸ್ ಕಸ್ಟಡಿಗೆ ಪಡೆಯಲಾಗುವುದು. ಯಾವ ಕಾರಣಕ್ಕಾಗಿ ಪ್ರವೀಣ್ ಅವರನ್ನೇ ಹತ್ಯೆ ಮಾಡಲಾಗಿದೆ ಎಂಬ ಕುರಿತು ಸಮಗ್ರ ತನಿಖೆ‌ ನಡೆಸಲಾಗುವುದು. ನಂತರ ಎನ್‌ಐಎಗೆ ಪ್ರಕರಣವನ್ನು ವಹಿಸಲಾಗುವುದು ಎಂದರು.

ADVERTISEMENT

ಶಿಯಾಬುದ್ದೀನ್ ಸಂಸ್ಥೆಯೊಂದಕ್ಕೆ ಕೋಕೊ ಸಪ್ಲೈ ಮಾಡುತ್ತಿದ್ದ.ರಿಯಾಝ್ ಅಂಕತಡ್ಕ ಚಿಕನ್ ಸ್ಟಾಲ್‌ಗಳಿಗೆ ಕೋಳಿಗಳನ್ನು ಸಪ್ಲೈ ಮಾಡುವ ಕೆಲಸ ನಿರ್ವಹಿಸುತ್ತಿದ್ದ. ಬಶೀರ್ ಹೋಟೆಲೊಂದರಲ್ಲಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಓದಿ...

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.