ADVERTISEMENT

ಬೈಕ್ ರ‍್ಯಾಲಿಗೆ ತಡೆ– ಪ್ರತಿಭಟನಾಕಾರರ ಬಂಧನ

​ಪ್ರಜಾವಾಣಿ ವಾರ್ತೆ
Published 15 ನವೆಂಬರ್ 2022, 5:57 IST
Last Updated 15 ನವೆಂಬರ್ 2022, 5:57 IST
ಉರ್ವಸ್ಟೋರ್‌ನಿಂದ ಸುರತ್ಕಲ್‌ಗೆ ಪಾದಯಾತ್ರೆಯಲ್ಲಿ ತೆರಳಲು ಮುಂದಾದ ಡಿವೈಎಫ್‌ಐ ಹಾಗೂ ಎಸ್‌ಎಫ್‌ಐ ಕಾರ್ಯಕರ್ತರನ್ನು ಪೊಲೀಸರು ತಡೆದರು
ಉರ್ವಸ್ಟೋರ್‌ನಿಂದ ಸುರತ್ಕಲ್‌ಗೆ ಪಾದಯಾತ್ರೆಯಲ್ಲಿ ತೆರಳಲು ಮುಂದಾದ ಡಿವೈಎಫ್‌ಐ ಹಾಗೂ ಎಸ್‌ಎಫ್‌ಐ ಕಾರ್ಯಕರ್ತರನ್ನು ಪೊಲೀಸರು ತಡೆದರು   

ಮಂಗಳೂರು: ಸುರತ್ಕಲ್ ಟೋಲ್ ಗೇಟ್ ತೆರವಿಗೆ ಒತ್ತಾಯಿಸಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಹಗಲು ರಾತ್ರಿ ಧರಣಿಯನ್ನು ಬೆಂಬಲಿಸಿ ಉರ್ವಸ್ಟೋರ್ ಜಂಕ್ಷನ್‌ನಿಂದ ಪ್ರತಿಭಟನಾ ಸ್ಥಳದವರೆಗೆ ಡಿವೈಎಫ್ಐ ಹಾಗೂ ಎಸ್ಎಫ್ಐ ವತಿಯಿಂದ ನಡೆಸಲು ಉದ್ದೇಶಿಸಿದ್ದ ಬೈಕ್ ರ‍್ಯಾಲಿಗೆ ಪೊಲೀಸರು ತಡೆ ಒಡ್ಡಿದ್ದಾರೆ.

ಈ ಬೈಕ್ ರ‍್ಯಾಲಿಗೆ ಪೊಲೀಸರು ಅನುಮತಿ ನಿರಾಕರಿಸಿದರು. ಈ ವೇಳೆ ಡಿವೈಎಫ್ಐ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. 50ಕ್ಕೂ ಅಧಿಕ ಬೈಕ್‌ಗಳನ್ನು ಪೊಲೀಸರು ವಶಕ್ಕೆ ಪಡೆದರು. ಬಳಿಕ ಪಾದಯಾತ್ರೆ ಮೂಲಕವೇ ಪಾದಯಾತ್ರೆಯ ಮೂಲಕವೇ ಸುರತ್ಕಲ್‌ಗೇ ತೆರಳಲು ಪ್ರತಿಭಟನಾಕಾರರು ಮುಂದಾದರು. ಆಗ ಅವರನ್ನು ಉರ್ವ ಠಾಣಾ ಪೊಲೀಸರು ತಡೆದು ಬಂಧಿಸಿದರು.

ಡಿವೈಎಫ್ಐ ಜಿಲ್ಲಾ ಘಟಕದ ಅಧ್ಯಕ್ಷರಾದ ಬಿ.ಕೆ ಇಮ್ತಿಯಾಜ್, ಕಾರ್ಯದರ್ಶಿ ಸಂತೋಷ್ ಬಜಾಲ್, ನವೀನ್ ಕೊಂಚಾಡಿ ಸಹಿತ ಸುಮಾರು 25ಕ್ಕೂ ಅಧಿಕ ಕಾರ್ಯಕರ್ತರನ್ನು ಉರ್ವ ಪೊಲೀಸರು ಬಂಧಿಸಿ ನಂತರ ಬಿಡುಗಡೆಗೊಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.