ADVERTISEMENT

ಹಡಗು ದುರಂತ: ಗಾಯಗೊಂಡವರಿಗೆ ಮಂಗಳೂರಿನಲ್ಲಿ ಚಿಕಿತ್ಸೆ

​ಪ್ರಜಾವಾಣಿ ವಾರ್ತೆ
Published 9 ಜೂನ್ 2025, 19:32 IST
Last Updated 9 ಜೂನ್ 2025, 19:32 IST
   

ಮಂಗಳೂರು: ಕೇರಳದ ಕೋಯಿಕ್ಕೋಡ್ ಬೇಪೂರ್ ಭಾಗದ ಸಮುದ್ರದಲ್ಲಿ ಬೆಂಕಿ ಕಾಣಿಸಿಕೊಂಡ ಎಂವಿ ವ್ಯಾನ್ ಹೈ 503 ಹಡಗಿನಲ್ಲಿದ್ದ ಗಾಯಗೊಂಡ ಮತ್ತು ಸುರಕ್ಷಿತರಾಗಿ ಹೊರಬಂದ ಸಿಬ್ಬಂದಿಯನ್ನು ಕರೆದುಕೊಂಡು ಬಂದ ಐಎನ್‌ಎಸ್ ಸೂರತ್ ಹಡಗು ಸೋಮವಾರ ರಾತ್ರಿ ಮಂಗಳೂರು ತಲುಪಿದೆ.

ಚೀನಾದ ಎಂಟು ಮಂದಿ, ತಾಯ್ವಾನ್‌ ಮತ್ತು ಮ್ಯಾನ್ಮಾರ್‌ನ ತಲಾ ನಾಲ್ವರು, ಇಂಡೊನೇಷ್ಯಾದ ಇಬ್ಬರನ್ನು ನೌಕಾಪಡೆಯ ಹಡಗಿನಲ್ಲಿ ನವಮಂಗಳೂರು ಬಂದರು ನಿಗಮಕ್ಕೆ ಕರೆದುಕೊಂಡು ಬರಲಾಯಿತು.

10.45ರ ವೇಳೆ ತಲುಪಿದ ಹಡಗಿನಲ್ಲಿದ್ದ 18 ಮಂದಿಯ ಪೈಕಿ ಗಂಭೀರ ಗಾಯಗೊಂಡ ಇಬ್ಬರು ಸೇರಿದಂತೆ ಆರು ಮಂದಿಯನ್ನು ಕರಾವಳಿ ಕಾವಲು ಪಡೆಯ ಸಿಬ್ಬಂದಿ ನೆರವಿನೊಂದಿಗೆ ಆಂಬುಲೆನ್ಸ್‌ನಲ್ಲಿ ಕುಂಟಿಕಾನದ ಎಜೆ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು.

ADVERTISEMENT

ಗಂಭೀರ ಸ್ಥಿತಿಯಲ್ಲಿರುವ ಇಬ್ಬರನ್ನು ಸ್ಟ್ರೆಚರ್‌ನಲ್ಲಿ ಆಸ್ಪತ್ರೆಯ ಒಳಗೆ ಕರೆದುಕೊಂಡು ಹೋಗಲಾಯಿತು. ನಾಲ್ವರು ನಡೆದುಕೊಂಡೇ ಹೋದರು. ಗಾಯಗಳಿಲ್ಲದವರನ್ನು ಹೋಟೆಲ್‌ನಲ್ಲಿ ಇರಿಸಲಾಗಿದೆ ಎಂದು ನಗರ ಪೊಲೀಸರು ತಿಳಿಸಿದ್ದಾರೆ.

ಲು ಯಾನ್ಲಿ ಮತ್ತು ಸೊನಿತುರ್ ಹೆನಿ ಅವರಿಗೆ ಗಂಭೀರ ಸುಟ್ಟ ಗಾಯಗಳಾಗಿದ್ದು ಕ್ಸು ಫ್ಯಾಬೊ, ಗುವೊ ಲಿನಿನೊ, ಥೆಯಿನ್ ಥಾನ್ ಹೆತೆ ಮತ್ತು ಕಿ ಜುವೊ ಹುತು ಅವರಿಗೆ ಸಾಮಾನ್ಯ ಗಾಯಗಳಾಗಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.