ಮೂಡುಬಿದಿರೆ: ಇಲ್ಲಿನ ಒಂಟಿಕಟ್ಟೆ ಕಡಲಕೆರೆಯಲ್ಲಿ ಈ ಸಾಲಿನ ದೋಣಿ ವಿಹಾರಕ್ಕೆ ಶಾಸಕ ಉಮಾನಾಥ ಕೋಟ್ಯಾನ್ ಮಂಗಳವಾರ ಸಂಜೆ ಚಾಲನೆ ನೀಡಿದರು.
ಸುಮಾರು 20 ಸಾವಿರ ಕಾಟ್ಲಾ ಹಾಗೂ ಸುಮಾರು 20 ಸಾವಿರ ಕಾಮನ್ ಕಾರ್ಪ್ ಮೀನಿನ ಮರಿಗಳನ್ನು ಕೆರೆಗೆ ಬಿಟ್ಟರು. ಮಾಜಿ ಶಾಸಕ ಅಭಯಚಂದ್ರ ಜೈನ್, ಪುರಸಭೆ ಅಧ್ಯಕ್ಷೆ ಜಯಶ್ರೀ, ಉಪಾಧ್ಯಕ್ಷ ನಾಗರಾಜ್ ಪೂಜಾರಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್, ರೋಟರಿ ಅಧ್ಯಕ್ಷ ರವಿ ಪ್ರಸಾದ್ ಉಪಾಧ್ಯಾಯ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.