ADVERTISEMENT

ತುಂಬೆ: ಗಾಯಗೊಂಡ ಸ್ಥಿತಿಯಲ್ಲಿ ಯುವಕನ ಶವ ಪತ್ತೆ

​ಪ್ರಜಾವಾಣಿ ವಾರ್ತೆ
Published 7 ಮೇ 2024, 13:47 IST
Last Updated 7 ಮೇ 2024, 13:47 IST

ಬಂಟ್ವಾಳ: ಇಲ್ಲಿನ ತುಂಬೆ ಸಮೀಪದ ಬ್ರಹ್ಮರಕೂಟ್ಲು ಬಂಟರ ಭವನದ ಬಳಿ ಬಿದ್ದು ಗಾಯಗೊಂಡ ಸ್ಥಿತಿಯಲ್ಲಿ ಯುವಕನ ಶವ ಮಂಗಳವಾರ ಪತ್ತೆಯಾಗಿದೆ.

ಉಪ್ಪಿನಂಗಡಿ ವಳಾಲು ನಿವಾಸಿ ಸಂತೋಷ್ ಎಂಬಾತನ ಶವ ಎಂದು ಪೊಲೀಸರು ತಿಳಿಸಿದ್ದಾರೆ.

ಅವರ ಬೈಕ್ ಕೂಡ ಅಲ್ಲೇ ಪತ್ತೆಯಾಗಿದ್ದು, ಅವರು ಬೈಕ ನಿಲ್ಲಿಸಿ ಆವರಣಗೋಡೆ ಮೇಲೆ ಕುಳಿತಿದ್ದ ವೇಳೆ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿರುವ ಸಾಧ್ಯತೆ ಇದೆ ಎಂದು ಗ್ರಾಮಾಂತರ ಠಾಣೆ ಪೊಲೀಸರು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.