ADVERTISEMENT

ಮಂಗಳೂರು: ಬಾಯ್ಲರ್ ಸ್ಫೋಟ; 6 ಕಾರ್ಮಿಕರಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2021, 4:11 IST
Last Updated 3 ಮಾರ್ಚ್ 2021, 4:11 IST
 ಬಾಯ್ಲರ್ ಸ್ಫೋಟ ಸಂಭವಿಸಿರುವ ಫ್ಲೈವುಡ್ ಫ್ಯಾಕ್ಟರಿ
ಬಾಯ್ಲರ್ ಸ್ಫೋಟ ಸಂಭವಿಸಿರುವ ಫ್ಲೈವುಡ್ ಫ್ಯಾಕ್ಟರಿ   

ಮಂಗಳೂರು: ಫ್ಲೈವುಡ್ ಫ್ಯಾಕ್ಟರಿಯಲ್ಲಿ ಮಂಗಳವಾರ ತಡರಾತ್ರಿ ಬಾಯ್ಲರ್ ಸ್ಫೋಟದಲ್ಲಿ ಆರು ಕಾರ್ಮಿಕರು ಗಾಯಗೊಂಡಿದ್ದಾರೆ.

ಗಾಯಗೊಂಡವರು ಬಿಹಾರದ ಕಾರ್ಮಿಕರಾಗಿದ್ದಾರೆ. ಗಂಭೀರ ಗಾಯಗೊಂಡವರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಪೋಟದ ಬಳಿಕ ಫ್ಯಾಕ್ಟರಿಯಲ್ಲಿ ಅಗ್ನಿ ಅನಾಹುತ ಕಂಡುಬಂದಿದ್ದು, ಉಪ್ಪಳದಿಂದ ಬಂದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದರು. ಘಟನೆಯಿಂದ ಲಕ್ಷಾಂತರ ನಷ್ಟ ಉಂಟಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.