ಬೆಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿ ಒಬ್ಬ ವ್ಯಕ್ತಿ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ಬೆಳಿಗ್ಗೆ 8 ಗಂಟೆಯಿಂದ 9 ಗಂಟೆ ಮಧ್ಯೆ ಶರಣಾಗಿದ್ದಾನೆ ಎಂದು ಕೇಂದ್ರ ವಿಭಾಗದ ಡಿಸಿಪಿ ಚೇತನ್ ಸಿಂಗ್ ರಾಥೋಡ್ ಹೇಳಿದರು.
ಶರಣಾದ ವ್ಯಕ್ತಿಯನ್ನು ಆದಿತ್ಯ ರಾವ್ ಎಂದು ಗುರುತಿಸಲಾಗಿದೆ. ಆತ ನಾನೇ ಬಾಂಬ್ ಇಟ್ಟಿರುವುದಾಗಿ ತಪ್ಪು ಒಪ್ಪಿಕೊಂಡಿದ್ದಾನೆ. ಆತನ ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತಿದೆ ಎಂದರು.
ಈ ಪ್ರಕರಣವನ್ನು ಮಂಗಳೂರು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅವರು ಬೆಂಗಳೂರು ಬರುತ್ತಿದ್ದಾರೆ. ಹೆಚ್ಚಿನ ತನಿಖೆಗಾಗಿ ಆತನನ್ನು ಅವರಿಗೆ ಹಸ್ತಾಂತರಿಸಲಾಗುವುದು. ಆತ ಈ ಹಿಂದೆ ಭಾಗಿಯಾದ ಘಟನೆಗಳ ಬಗ್ಗೆ ಇನ್ನಷ್ಟೇ ವಿಚಾರಣೆ ಮಾಡಬೇಕಿದೆ ಎಂದರು.
ಇನ್ನಷ್ಟು...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.