ADVERTISEMENT

ದಕ್ಷಿಣ ಕನ್ನಡ: ಕಣಚೂರು ಆಸ್ಪತ್ರೆ, ವೈದ್ಯಕೀಯ ಕಾಲೇಜಿಗೆ ಬಾಂಬ್ ಹುಸಿ ಬೆದರಿಕೆ

​ಪ್ರಜಾವಾಣಿ ವಾರ್ತೆ
Published 4 ಜೂನ್ 2025, 9:25 IST
Last Updated 4 ಜೂನ್ 2025, 9:25 IST
   

ಉಳ್ಳಾಲ (ದಕ್ಷಿಣ ಕನ್ನಡ): ತಾಲ್ಲೂಕಿನ ನಾಟೆಕಲ್‌ನಲ್ಲಿರುವ ಕಣಚೂರು ಆಸ್ಪತ್ರೆ ಹಾಗೂ ವೈದ್ಯಕೀಯ ಕಾಲೇಜಿನಲ್ಲಿ ಬಾಂಬ್ ಇಡಲಾಗಿದೆ ಎಂಬ ಪೋನ್ ಕರೆ ಬಂದಿದೆ.

ಸ್ಥಳಕ್ಕೆ ಧಾವಿಸಿದ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಸಂಪೂರ್ಣ ಆಸ್ಪತ್ರೆ ಹಾಗೂ ಕಾಲೇಜನ್ನು ಪರಿಶೀಲಿಸಿದ್ದು, ಇದೊಂದು ಹುಸಿ ಕರೆ ಎಂದು ಗೊತ್ತಾಗಿದೆ.

ಬುಧವಾರ ಬೆಳಿಗ್ಗೆ 8.15ರ ಹೊತ್ತಿಗೆ ಆಸ್ಪತ್ರೆಯ ಪ್ರಸವ ಕೊಠಡಿಯಲ್ಲಿರುವ ಫೋನಿಗೆ ದೂರವಾಣಿ ಕರೆ ಬಂದಿತ್ತು. ಕರೆ ಮಾಡಿದ್ದ ವ್ಯಕ್ತಿ ಬೆಳಿಗ್ಗೆ 11 ಗಂಟೆಗೆ ಬಾಂಬ್ ಸ್ಪೋಟಿಸುವುದಾಗಿ ತಿಳಿಸಿದ್ದ. ಕಟ್ಟಡದಲ್ಲಿದ್ದ ಎಲ್ಲರನ್ನು ಹೊರಗೆ ಕಳುಹಿಸುವಂತೆ ಬೆದರಿಕೆ ಹಾಕಿದ್ದ. ಆಸ್ಪತ್ರೆಯ ಆಡಳಿತಾಧಿಕಾರಿ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದರು.

ADVERTISEMENT

ಬಾಂಬ್ ಇಟ್ಟಿರುವುದಾಗಿ ಹುಸಿ ಕರೆ ಮಾಡಿದ್ದ ಬಗ್ಗೆ ಉಳ್ಳಾಲ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕರೆ ಮಾಡಲು ಬಳಸಿದ್ದ ಮೊಬೈಲ್ ನಂಬರ್ ಪರಿಶೀಲಿಸಿರುವ ಪೊಲೀಸರು,ಆರೋಪಿಯ ಪತ್ತೆಗೆ ಕ್ರಮ ವಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.