ADVERTISEMENT

ಬೆಳ್ತಂಗಡಿ: ಸತ್ಯಶೋಧಕ ವೇದಿಕೆಯಿಂದ ಪುಸ್ತಕ ವಿತರಣೆ

​ಪ್ರಜಾವಾಣಿ ವಾರ್ತೆ
Published 27 ಮೇ 2025, 12:58 IST
Last Updated 27 ಮೇ 2025, 12:58 IST
ಎಸ್‌ಎಸ್‌ಎಲ್‌ಸಿ ಮತ್ತು  ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುನ್ನತ ಅಂಕಗಳಿಸಿದ ವಿದ್ಯಾರ್ಥಿಗಳನ್ನು ಬೆಳ್ತಂಗಡಿ ಸತ್ಯಶೋಧಕ ವೇದಿಕೆ ವತಿಯಿಂದ ಅಭಿನಂದಿಸಲಾಯಿತು
ಎಸ್‌ಎಸ್‌ಎಲ್‌ಸಿ ಮತ್ತು  ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುನ್ನತ ಅಂಕಗಳಿಸಿದ ವಿದ್ಯಾರ್ಥಿಗಳನ್ನು ಬೆಳ್ತಂಗಡಿ ಸತ್ಯಶೋಧಕ ವೇದಿಕೆ ವತಿಯಿಂದ ಅಭಿನಂದಿಸಲಾಯಿತು   

ಬೆಳ್ತಂಗಡಿ: ‘ಅಂಬೇಡ್ಕರ್ ಚಿಂತನೆ ನಮ್ಮೆಲ್ಲರ ಸಾಮಾಜಿಕ ಜೀವನ, ಸಮಾಜಮುಖಿ ಕೆಲಸಗಳಿಗೆ ಪ್ರೇರಣೆಯಾಗಿದೆ. ಸತ್ಯ ಶೋಧಕ ವೇದಿಕೆಯ ಮೂಲಕ ಸಮಾಜ ಸುಧಾರಕರ ತತ್ವ ಅನುಷ್ಠಾನಗೊಳ್ಳುತ್ತಿದೆ’ ಎಂದು ಶಾಸಕ ಹರೀಶ್ ಪೂಂಜ ಹೇಳಿದರು.

ಬೆಳ್ತಂಗಡಿಯ ಅಂಬೇಡ್ಕರ್ ಭವನದಲ್ಲಿ ಸತ್ಯಶೋಧಕ ವೇದಿಕೆ ಆಶ್ರಯದಲ್ಲಿ ನಡೆದ ಬುದ್ಧ, ಬಸವ, ಫುಲೆ ಹಾಗೂ ಅಂಬೇಡ್ಕರ್ ಜಯಂತಿ ಪ್ರಯುಕ್ತ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅಭಿನಂದನೆ, ಪುಸ್ತಕ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಪ್ರತಿ ವರ್ಷ 100 ವಿದ್ಯಾರ್ಥಿಗಳ ಪುಸ್ತಕದ ವೆಚ್ಚವನ್ನು ಭರಿಸುತ್ತೇನೆ’ ಎಂದರು.

ADVERTISEMENT

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮಾತನಾಡಿ, ‘ವಿದ್ಯಾರ್ಥಿಗಳು ಭಾಷಾ ಸ್ಪಷ್ಟತೆಗಾಗಿ ಪತ್ರಿಕೆಗಳನ್ನು ಓದುವ ಹವ್ಯಾಸ ಬೆಳೆಸಿಕೊಂಡು ಹೊರಗಿನ ವಿದ್ಯಮಾನಗಳನ್ನು ತಿಳಿದುಕೊಳ್ಳಬೇಕು’ ಎಂದರು.

ಬಿಜೆಪಿ ಬೆಳ್ತಂಗಡಿ ಮಂಡಲ ಪರಿಶಿಷ್ಟ ಜಾತಿ ಮೋರ್ಚಾ ಅಧ್ಯಕ್ಷ ಈಶ್ವರ ಬೈರ ಮಾತನಾಡಿದರು.

ಸತ್ಯಶೋಧಕ ವೇದಿಕೆ ಬೆಳ್ತಂಗಡಿ ಅಧ್ಯಕ್ಷ ಸುಕೇಶ್ ಕೆ.ಮಾಲಾಡಿ ಅಧ್ಯಕ್ಷತೆ ವಹಿಸಿದ್ದರು.

ಪ್ರಮುಖರಾದ ಪದ್ಮನಾಭ ಸಾಲ್ಯಾನ್, ಶ್ಯಾಮ್ ಪ್ರಸಾದ್ ಕಾಮತ್, ಬಾಬು ಎರ್ಮೆತ್ತೋಡಿ, ಗಿರೀಶ್ ಪಣಕಜೆ, ಯೋಗೀಶ್ ಪಣಕಜೆ, ಹರೀಶ್ ಕುಕ್ಕಳ, ಸತೀಶ್ ಉಜಿರೆ, ಶೀನ ಕುಳ್ಳಂಜ, ಹರೀಶ್ ಪಣಕಜೆ, ಸತೀಶ್ ಮಡಂತ್ಯಾರ್, ಚರಣ್ ಕುಕ್ಕೇಡಿ, ನಯನಾ ಪುರಿಯ, ವಿಶ್ವನಾಥ್ ಕಳೆಂಜ, ವಿಠಲ್ ಪುರಿಯ, ಸುನೀತಾ ಮಡಂತ್ಯಾರ್ ಭಾಗವಹಿಸಿದ್ದರು.

ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುನ್ನತ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನೆ, 5ರಿಂದ 10ನೇ ತರಗತಿವರೆಗಿನ ಅರ್ಹ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಿಸಲಾಯಿತು.

ಸುಶ್ಮಿತಾ, ಸುರಕ್ಷಿತಾ ನಾರಾವಿ ನಾಡಗೀತೆ ಹಾಡಿದರು. ಲಲಿತಾ ಕಳೆಂಜ ಕಾರ್ಯಕ್ರಮ ನಿರೂಪಿಸಿ, ಪ್ರಿಯಾ ಕಳೆಂಜ ಸ್ವಾಗತಿಸಿದರು. ಸುಶ್ಮಿತಾ ಮಾಲಾಡಿ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.