ADVERTISEMENT

ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು: ರಮಾನಾಥ ರೈ

​ಪ್ರಜಾವಾಣಿ ವಾರ್ತೆ
Published 13 ಏಪ್ರಿಲ್ 2022, 12:10 IST
Last Updated 13 ಏಪ್ರಿಲ್ 2022, 12:10 IST
ರಮಾನಾಥ ರೈ
ರಮಾನಾಥ ರೈ   

ಮಂಗಳೂರು: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಸಚಿವ ಸಂಪುಟದಿಂದ ಕೈಬಿಡುವ ಜತೆಗೆ ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಕೆಪಿಸಿಸಿ ಉಪಾಧ್ಯಕ್ಷ ರಮಾನಾಥ ರೈ ಆಗ್ರಹಿಸಿದರು.

ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈಶ್ವರಪ್ಪ ಅವರಿಗೆ ಶೇ 40 ಕಮಿಷನ್ ನೀಡಬೇಕು ಎಂದು ಆರೋಪಿಸಿದ್ದ ಬೆಳಗಾವಿಯ ಗುತ್ತಿಗೆದಾರ ಸಂತೋಷ ಕೆ. ಪಾಟೀಲ್ ಡೆತ್‌ನೋಟ್ ಬರೆದಿಟ್ಟು, ಆತ್ಮಹತ್ಯೆ ಮಾಡಿಕೊಂಡಿದ್ದು, ಇದು ಹತ್ಯೆಗೆ ಸಮಾನವಾಗಿದೆ. ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಈಶ್ವರಪ್ಪ ಅವರನ್ನು ಬಂಧಿಸಬೇಕು’ ಎಂದು ಒತ್ತಾಯಿಸಿದರು.

ಹಿಂದೆ ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಮಾಡಿಕೊಂಡ ಸಂದರ್ಭದಲ್ಲಿ ಆಡಳಿತ ನಡೆಸುತ್ತಿದ್ದ ಕಾಂಗ್ರೆಸ್ ಪಕ್ಷ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಿಬಿಐ ತನಿಖೆಗೆ ವಹಿಸಿದ್ದ ಜತೆಗೆ, ಆರೋಪ ಎದುರಿಸಿದ ಸಚಿವ ಕೆ.ಜೆ.ಜಾರ್ಜ್ ಅವರಿಂದ ರಾಜೀನಾಮೆ ಪಡೆದಿತ್ತು. ಈ ಪ್ರಕರಣ ಮತ್ತು ಪ್ರಸ್ತುತ ಆತ್ಮಹತ್ಯೆ ಮಾಡಿಕೊಂಡಿರುವ ಸಂತೋಷ್ ಪ್ರಕರಣವನ್ನು ಹೋಲಿಕೆ ಮಾಡಲಾಗದು. ಸಂತೋಷ್ ಪಾಟೀಲ್ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ಇನ್ನೂ ಗಂಭೀರ ಪ್ರಕರಣವಾಗಿದೆ ಎಂದರು.

ADVERTISEMENT

ರಾಜ್ಯ ಸರ್ಕಾರದ 40 ಪರ್ಸೆಂಟೇಜ್ ಬಗ್ಗೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು. ಆದರೆ, ಮೋದಿ ಈ ವಿಚಾರವನ್ನು ನಿರ್ಲಕ್ಷಿಸಿದ್ದರಿಂದ ಈಗ ಇಂತಹ ಪರಿಸ್ಥಿತಿ ಎದುರಾಗಿದೆ ಎಂದು ದೂರಿದರು.

ಕೆಪಿಸಿಸಿ ಉಪಾಧ್ಯಕ್ಷ ಪಿ.ವಿ.ಮೋಹನ್, ಪ್ರಧಾನ ಕಾರ್ಯದರ್ಶಿಗಳಾದ ಕೃಪಾ ಅಮರ್ ಆಳ್ವ, ಮಮತಾ ಗಟ್ಟಿ, ಮುಖಂಡರಾದ ಶಶಿಧರ ಹೆಗ್ಡೆ, ಹರಿನಾಥ್, ಪುರುಷೋತ್ತಮ ಚಿತ್ರಾಪುರ, ಜಯಶೀಲ ಅಡ್ಯಂತಾಯ, ಅಬ್ದುಲ್ ರವೂಫ್, ಅಶೋಕ್ ಡಿ.ಕೆ., ಉಮೇಶ್ ದಂಡಕೇರಿ, ಬೇಬಿ ಕುಂದರ್, ಮುಸ್ತಫ, ಶಬ್ಬೀರ್, ನಝೀರ್ ಬಜಾಲ್ ಇದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.