ADVERTISEMENT

ಮಂಗಳೂರು: ಕೊಳವೆಬಾವಿ, ಕೆರೆಗಳ ಜಿಯೋ ಟ್ಯಾಗಿಂಗ್

ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಲು ಜಿ.ಪಂ. ಸಿಇಒ ಡಾ. ಕುಮಾರ್ ಸಲಹೆ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2022, 4:31 IST
Last Updated 16 ಸೆಪ್ಟೆಂಬರ್ 2022, 4:31 IST

ಮಂಗಳೂರು: ಕೇವಲ ಕಡತಗಳ ನಿರ್ವಹಣೆಯಲ್ಲಿ ಕಳೆದು ಹೋಗದೆ ಆತ್ಮತೃಪ್ತಿಯಿಂದ ಕೆಲಸ ಮಾಡಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಹೇಳಿದರು.

ನಗರದ ಜಿಲ್ಲಾ ಪಂಚಾಯಿತಿ ನೇತ್ರಾವತಿ ಸಭಾಂಗಣದಲ್ಲಿ ಗುರುವಾರ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ವಿವಿಧ ವಿಷಯಗಳ ಕುರಿತು ಹಮ್ಮಿಕೊಳ್ಳಲಾಗಿದ್ದ ತರಬೇತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಸರ್ಕಾರದ ನಿರ್ದೇಶನದಂತೆ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಕೃಷಿ ತೆರಿಗೆ ನಿರ್ಧರಣೆಗೆ ಒಳಪಟ್ಟಿರದ ಎಲ್ಲ ಭೂಮಿ ಮತ್ತು ಕಟ್ಟಡಗಳ ಸಮೀಕ್ಷೆ ನಡೆಸಿ, ಅದನ್ನು ತೆರಿಗೆ ವ್ಯಾಪ್ತಿಗೆ ಒಳಪಡಿಸಿ, ಪಂಚ ತಂತ್ರಾಂಶದಲ್ಲಿ ಅಳವಡಿಸುವ ಪ್ರಕ್ರಿಯೆಗೆ ಚಾಲನೆ ನೀಡಬೇಕಿದೆ. ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಭಿವೃದ್ಧಿಗೆ ವಿಶೇಷ ಗಮನ ಹರಿಸಬೇಕು. ಪ್ಲೇ ಸ್ಟೋರ್‌ನಿಂದ ಆರ್.ಡಬ್ಲ್ಯು.ಎಸ್ ಆ್ಯಪ್ ಡೌನ್‍ಲೋಡ್ ಮಾಡಿಕೊಂಡು ಗ್ರಾಮದಲ್ಲಿರುವ ಕೊಳವೆಬಾವಿ, ಕೆರೆಗಳನ್ನು ಜಿಯೋ ಟ್ಯಾಗಿಂಗ್‍ಗೆ ಒಳಪಡಿಸಬೇಕು. ಪ್ರಧಾನ ಮಂತ್ರಿ ಜನಾರೋಗ್ಯ ಕಾರ್ಡ್ ಪಡೆಯುವ ಬಗ್ಗೆ ಜಾಗೃತಿ ಮೂಡಿಸಬೇಕು ಎಂದರು.ಸ್ವಚ್ಛತಾ ಹೀ ಸೇವಾ ಆಂದೋಲನ ಉದ್ಘಾಟಿಸಿ ಮಾತನಾಡಿದ ಡಾ. ಕುಮಾರ್, ಆರೋಗ್ಯಪೂರ್ಣ ಪರಿಸರವನ್ನು ನಿರ್ಮಿಸುವುದು ಕೇವಲ ಪೌರಕಾ
ರ್ಮಿಕರು ಮತ್ತು ಸರ್ಕಾರದ ಇಲಾಖೆಗಳ ಜವಾಬ್ದಾರಿಯಲ್ಲ, ಈ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ನಾಗರಿಕ ಪಾಲ್ಗೊಳ್ಳಬೇಕು ಎಂದರು.

ADVERTISEMENT

ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಕೆ. ಆನಂದ ಕುಮಾರ್, ಯೋಜನಾ ನಿರ್ದೇಶಕ ಎಚ್.ಆರ್. ನಾಯಕ್, ಮುಖ್ಯ ಯೋಜನಾಧಿಕಾರಿ ಸಂಧ್ಯಾ ಕೆ.ಎಸ್, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿಗಳಾದ ಭವಾನಿ ಶಂಕರ್, ಕುಸುಮಾಧರ್, ದಯಾವತಿ, ರಾಜಣ್ಣ ಹಾಗೂ ಸ್ವಚ್ಛ ಭಾರತ್ ಮಿಷನ್ ಜಿಲ್ಲಾ ಸಮಾಲೋಚಕ ಡೊಂಬಯ್ಯ ಇಡ್ಕಿದು, ಪವನ್ ಕುಮಾರ್ ಎಸ್. ಶೆಟ್ಟಿ ಹಾಗೂ ನವೀನ್, ಜಲಜೀವನ್ ಮಿಷನ್‍ನ ವಿಘ್ನೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.