ADVERTISEMENT

ಬೆಳ್ತಂಗಡಿ | ಬಾಲಕ ಸಾವು: ಕೊಲೆ ಪ್ರಕರಣ ದಾಖಲು

ಡಿವೈಎಸ್ಪಿ ರೋಹಿಣಿ ಸಿ.ಕೆ.ನೇತೃತ್ವದಲ್ಲಿ ತನಿಖೆ

​ಪ್ರಜಾವಾಣಿ ವಾರ್ತೆ
Published 16 ಜನವರಿ 2026, 8:32 IST
Last Updated 16 ಜನವರಿ 2026, 8:32 IST
<div class="paragraphs"><p>ಸಾವು&nbsp; (ಪ್ರಾತಿನಿಧಿಕ ಚಿತ್ರ)</p></div>

ಸಾವು  (ಪ್ರಾತಿನಿಧಿಕ ಚಿತ್ರ)

   

ಬೆಳ್ತಂಗಡಿ: ಧನುಪೂಜೆಗೆ ತೆರಳಿದ್ದ ಓಡಿಲ್ನಾಳ ಗ್ರಾಮದ ಬಾಲಕನ ಮೃತದೇಹ ಕೆರೆಯಲ್ಲಿ ಪತ್ತೆಯಾದ ಪ್ರಕರಣವನ್ನು ಕೊಲೆ ಎಂದು ದಾಖಲಿಸಿಕೊಂಡಿರುವ ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.

ಮೃತದೇಹ ದೊರೆತ ಕೆರೆಯಲ್ಲಿ ಬಾಲಕ ಮನೆಯಿಂದ ತಂದಿದ್ದ ಟಾರ್ಚ್ ಹಾಗೂ ಒಂದು ಹಳೆಯ ಕತ್ತಿ ಪತ್ತೆಯಾಗಿದ್ದು, ಇವುಗಳನ್ನು ಪೊಲೀಸರುವಶಕ್ಕೆ ಪಡೆದುಕೊಂಡಿದ್ದು ಪರಿಶೀಲನೆ ನಡೆಸಿದ್ದಾರೆ. 

ADVERTISEMENT

ಗುರುವಾರ ಬೆಳಗ್ಗಿನಿಂದಲೇ ಬೆಳ್ತಂಗಡಿ ಡಿವೈಎಸ್ಪಿ ರೋಹಿಣಿ ಸಿ.ಕೆ.ಅವರ ನೇತೃತ್ವದಲ್ಲಿ ಇನ್‌ಸ್ಪೆಕ್ಟರ್ ಸುಬ್ಬಾಪುರ ಮಠ್ ಹಾಗೂ ಪೊಲೀಸರ ತಂಡ ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿತು. ಇಡೀ ಪ್ರದೇಶದಲ್ಲಿ ಕೂಂಬಿಂಗ್ ಕಾರ್ಯಾಚರಣೆ ನಡೆಸಿ, ಮೃತದೇಹ ದೊರೆತ ಕೆರೆಯ ನೀರನ್ನು ಪೂರ್ಣವಾಗಿ ಖಾಲಿ ಮಾಡಲಾಗಿದೆ.

ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮುಗಿಸಿ ಸುಮಂತ್ ಮೃತದೇಹವನ್ನು ಗುರುವಾರ ಮನೆಗೆ ತಂದು ಅಂತ್ಯಕ್ರಿಯೆ ನಡೆಸಲಾಯಿತು.

ಬಾಲಕನ ಕೊಲೆ ಪ್ರಕರಣ ಸಂಬಂಧ ತನಿಖೆಗಾಗಿ ಬೆಳ್ತಂಗಡಿ ಡಿವೈಎಸ್ಪಿ ರೋಹಿಣಿ ಸಿ.ಕೆ.ಅವರ ನೇತೃತ್ವದಲ್ಲಿ ನಾಲ್ಕು ವಿಶೇಷ ತಂಡಗಳನ್ನು ರಚಿಸಲಾಗಿದ್ದು, ಎಲ್ಲ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್‌  ಮಾಹಿತಿ ನೀಡಿದ್ದಾರೆ.

ಪ್ರಾಥಮಿಕ ವರದಿ ಪ್ರಕಾರ ಈತ ಕೆರೆಯಲ್ಲಿ ಮುಳುಗುವ ಸಮಯದಲ್ಲಿ ಜೀವಂತವಾಗಿದ್ದ. ತಲೆಯ ಮೇಲಿನ ಗಾಯಗಳು ಯಾವುದೇ ಚೂಪಾದ ಆಯುಧಗಳಿಂದ ಆಗಿರುವ ಗಾಯಗಳಾಗಿಲ್ಲ ಎಂಬುದು ತಿಳಿದು ಬಂದಿದೆ. ಸಮಗ್ರ ಹಾಗೂ ಸೂಕ್ಷ್ಮ ತನಿಖೆ ನಡೆಸುವ ಉದ್ದೇಶದಿಂದ ಅಸಹಜ ಸಾವು ಪ್ರಕರಣವನ್ನು ಕೊಲೆ ಪ್ರಕರಣವಾಗಿ ಪರಿವರ್ತಿಸಿ ತನಿಖೆ ನಡೆಸಲಾಗುತ್ತಿದೆ ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.