ADVERTISEMENT

ಬ್ರಹ್ಮಾವರ | ಸಾಮೂಹಿಕ ಗೋ ಪೂಜೆ

ಕೋಟ ಪಂಚವರ್ಣ ಸಾಮೂಹಿಕ ಗೋ ಪೂಜೆ

​ಪ್ರಜಾವಾಣಿ ವಾರ್ತೆ
Published 14 ನವೆಂಬರ್ 2023, 7:42 IST
Last Updated 14 ನವೆಂಬರ್ 2023, 7:42 IST
ಕೋಟ ಹಂದಟ್ಟು ಹಾಲು ಡೈರಿಯಲ್ಲಿ ಪಂಚವರ್ಣ ಯುವಕ ಮಂಡಲ, ಮಹಿಳಾ ಮಂಡಲದ ನೇತೃತ್ವದಲ್ಲಿ ಸಾಮೂಹಿಕ ಗೋ ಪೂಜೆ ಕಾರ್ಯಕ್ರಮ ನಡೆಯಿತು.
ಕೋಟ ಹಂದಟ್ಟು ಹಾಲು ಡೈರಿಯಲ್ಲಿ ಪಂಚವರ್ಣ ಯುವಕ ಮಂಡಲ, ಮಹಿಳಾ ಮಂಡಲದ ನೇತೃತ್ವದಲ್ಲಿ ಸಾಮೂಹಿಕ ಗೋ ಪೂಜೆ ಕಾರ್ಯಕ್ರಮ ನಡೆಯಿತು.   

ಬ್ರಹ್ಮಾವರ: ಗೋವುಗಳ ಮಹತ್ವವನ್ನು ಪ್ರತಿಯೊಬ್ಬರೂ ತಿಳಿದುಕೊಂಡು ಅದಕ್ಕೆ ವಿಶೇಷ ಸ್ಥಾನ ನೀಡಬೇಕು ಎಂದು ಕೋಟತಟ್ಟು ಗ್ರಾಮ ಪಂಚಾಯಿತಿ ಸದಸ್ಯೆ ಪೂಜಾ ಪ್ರಸಾದ್ ಸಲಹೆ ನೀಡಿದರು.

ಕೋಟ ಹಂದಟ್ಟು ಹಾಲು ಡೈರಿಯಲ್ಲಿ ಪಂಚವರ್ಣ ಯುವಕ ಮಂಡಲ ಹಾಗೂ ಮಹಿಳಾ ಮಂಡಲದ ನೇತೃತ್ವದಲ್ಲಿ ಹಂದಟ್ಟು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ, ಮಹಿಳಾ ಬಳಗದ ಸಹಯೋಗದೊಂದಿಗೆ ನಡೆದ ಸಾಮೂಹಿಕ ಗೋ ಪೂಜೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಧಾರ್ಮಿಕವಾಗಿ ಗೋವುಗಳಿಗೆ ವಿಶೇಷ ಸ್ಥಾನವಿದೆ. ಹೀಗಾಗಿ ಗೋವುಗಳ ಹತ್ಯೆ ನಿಲ್ಲಿಸಬೇಕಾಗಿದೆ ಎಂದ ಅವರು, ಭರತ ಖಂಡದಲ್ಲಿ ಮುಕ್ಕೋಟಿ ದೇವತೆಗಳು ಗೋವುಗಳಲ್ಲಿ ಲೀನವಾಗಿವೆ. ಆದ್ದರಿಂದ ಪ್ರತಿಯೊಬ್ಬರೂ ಅದರ ಆರಾಧಕರಾಗಬೇಕು ಎಂದು ಅವರು ಹೇಳಿದರು.

ADVERTISEMENT

ಪುರೋಹಿತ ಮನೋಜ್ ಕುಮಾರ್ ಅವರು ಧಾರ್ಮಿಕ ವಿಧಿವಿಧಾನ ನೆರವೇರಿಸಿದರು. ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಅಜಿತ್ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು.

ಹಂದಟ್ಟು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಅಧ್ಯಕ್ಷೆ ಜಾನಕಿ ಹಂದೆ, ಹಂದಟ್ಟು ಮಹಿಳಾ ಬಳಗದ ಅಧ್ಯಕ್ಷ ರತ್ನ ಕೃಷ್ಣ ಪೂಜಾರಿ, ಸ್ಥಾಪಾಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ, ಮಹಿಳಾ ಮಂಡಲದ ಕಾರ್ಯದರ್ಶಿ ಲಲಿತಾ ಪೂಜಾರಿ, ‘ಗೋವಿಗಾಗಿ ಮೇವು’ ಯೋಜನೆಯ ಕೋಟ ಸಾಲಿಗ್ರಾಮ ವಲಯದ ಅಧ್ಯಕ್ಷ ಕೃಷ್ಣಮೂರ್ತಿ ಮರಕಾಲ, ಪಂಚವರ್ಣದ ಕಾರ್ಯಾಧ್ಯಕ್ಷ ರವೀಂದ್ರ ಕೋಟ ಇದ್ದರು.

ಹಂದಟ್ಟು ಮಹಿಳಾ ಬಳಗದ ಸ್ಥಾಪಾಕಾಧ್ಯಕ್ಷೆ ಪುಷ್ಪಾ ಕೆ ಹಂದಟ್ಟು ವಂದಿಸಿದರು. ಹಂದಟ್ಟು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಸುಜಾತಾ ಬಾಯರಿ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.