ADVERTISEMENT

ತುಂಬೆ: ಫೆ.18ರಂದು ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ

​ಪ್ರಜಾವಾಣಿ ವಾರ್ತೆ
Published 17 ಫೆಬ್ರುವರಿ 2024, 13:52 IST
Last Updated 17 ಫೆಬ್ರುವರಿ 2024, 13:52 IST
ಬಂಟ್ವಾಳ ತಾಲ್ಲೂಕಿನ ತುಂಬೆ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂಭ್ರಮಕ್ಕೆ ವಿಶೇಷವಾಗಿ ಅಲಂಕಾರಗೊಂಡಿದೆ
ಬಂಟ್ವಾಳ ತಾಲ್ಲೂಕಿನ ತುಂಬೆ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂಭ್ರಮಕ್ಕೆ ವಿಶೇಷವಾಗಿ ಅಲಂಕಾರಗೊಂಡಿದೆ   

ಬಂಟ್ವಾಳ: ಇಲ್ಲಿನ ತುಂಬೆ ರಾಷ್ಟ್ರೀಯ ಹೆದ್ದಾರಿ ಬಳಿ ₹ 5 ಕೋಟಿ ವೆಚ್ಚದಲ್ಲಿ ಪುನರ್ ನಿರ್ಮಾಣಗೊಂಡಿರುವ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿ ಮಾರ್ಗದರ್ಶನದಲ್ಲಿ ದೇವರ ವಿಗ್ರಹ ಪುನರ್ ಪ್ರತಿಷ್ಠೆ ಮತ್ತು ಅಷ್ಟಬಂಧ ಬ್ರಹ್ಮಕಲಶೋತ್ಸವ ಫೆ.18ರಂದು ಭಾನುವಾರ ನಡೆಯಲಿದೆ.

ಫೆ.13ರಿಂದ 23ರ ವರೆಗೆ ಬ್ರಹ್ಮಕಲಶೋತ್ಸವ ಸಹಿತ ಧ್ವಜಸ್ಥಂಭ ಪ್ರತಿಷ್ಠೆ ಮತ್ತು ಜಾತ್ರಾ ಮಹೋತ್ಸವ ನಡೆಯಲಿದ್ದು, ಹೊರೆಕಾಣಿಕೆ ಮೆರವಣಿಗೆ ನಡೆದಿದೆ. ಪ್ರತಿದಿನ ವಿವಿಧ ವೈದಿಕ ಕಾರ್ಯಕ್ರಮ ಸಹಿತ ಸಂಜೆ ಭಜನೆ, ಧಾರ್ಮಿಕ ಸಭೆ, ನಾಟಕ, ಯಕ್ಷಗಾನ, ಸಂಗೀತ, ನೃತ್ಯವೈಭವ
ಮೊದಲಾದ ಸಾಂಸ್ಕೃತಿಕ ಕಾರ್ಯಕ್ರಮ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯುತ್ತಿದೆ.

ಬಂಟ್ವಾಳ ತಾಲ್ಲೂಕಿನ ತುಂಬೆ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶನಿವಾರ ಭೇಟಿ ನೀಡಿದರು. ಬಿ.ರಮಾನಾಥ ರೈ ಚಂದ್ರಪ್ರಕಾಶ್ ಶೆಟ್ಟಿ ಅಶ್ವನಿ ಕುಮಾರ್ ಭಾಗವಹಿಸಿದ್ದರು

ತುಂಬೆ ಪೇಟೆಯಿಂದ ಮಾರಿಪಳ್ಳ ವರೆಗೆ ರಾಷ್ಟ್ರೀಯ ಹೆದ್ದಾರಿ ಉದ್ದಕ್ಕೂ ಬಂಟಿಂಗ್ಸ್ ಮತ್ತು ವಿದ್ಯುತ್ ದೀಪಗಳಿಂದ ಅಲಂಕಾರಗೊಂಡು ಭಕ್ತರನ್ನು ಆಕರ್ಷಿಸುತ್ತಿದೆ. ದೇವಳದ ಎದುರು ಅತ್ಯಾಕರ್ಷಕ ತೀರ್ಥಕೆರೆ ನಿರ್ಮಾಣಗೊಂಡಿದ್ದು, ಗಮನ ಸೆಳೆಯುತ್ತಿದೆ ಎಂದು ಜೀರ್ಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಚಂದ್ರಪ್ರಕಾಶ್ ಶೆಟ್ಟಿ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.