ADVERTISEMENT

ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ: ಮೆರವಣಿಗೆ

​ಪ್ರಜಾವಾಣಿ ವಾರ್ತೆ
Published 10 ಸೆಪ್ಟೆಂಬರ್ 2022, 12:24 IST
Last Updated 10 ಸೆಪ್ಟೆಂಬರ್ 2022, 12:24 IST
   

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿಯ ರಾಜ್ಯ ಮಟ್ಟದ ಕಾರ್ಯಕ್ರಮದ ಅಂಗವಾಗಿ ಶನಿವಾರ ಸಂಜೆ ನಗರದ ಲೇಡಿಹಿಲ್‍ನಲ್ಲಿರುವ ಬ್ರಹ್ಮಶ್ರೀ ನಾರಾಯಣ ಗುರುಗಳ ವೃತ್ತದಲ್ಲಿ ಮೆರಣಿಗೆಗೆ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಚಾಲನೆ ನೀಡಿದರು.

ವಿವಿಧ ವಿನ್ಯಾಸಗಳ ವಾಹನಗಳಲ್ಲಿ ನಾರಾಯಣ ಗುರುಗಳ ಚಿತ್ರಗಳು, ಚೆಂಡೆ, ಡೊಳ್ಳು ಕುಣಿತ, ಹುಲಿವೇಷ ವಿವಿಧ ಜಾನಪದ ಕಲಾತಂಡಗಳ ಮೆರವಣಿಗೆಯು ಟಿಎಂಎ ಪೈ ಸಭಾಂಗಣದ ವರೆಗೆ ಸಾಗಿತು.

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಶಾಸಕರಾದ ವೇದವ್ಯಾಸ್ ಕಾಮತ್, ಭರತ್ ಶೆಟ್ಟಿ, ಮಂಗಳೂರು ಮೇಯರ್ ಜಯಾನಂದ ಅಂಚನ್, ಸಾರ್ವಜನಿಕರು ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.