ಲಂಚ
ಮಂಗಳೂರು: ಲೋಕಾಯುಕ್ತ ಇನ್‌ಸ್ಪೆಕ್ಟರ್‌ಗೇ ಲಂಚ ನೀಡಲು ಮುಂದಾದ ಕಾನೂನು ಮಾಪನ ವಿಜ್ಞಾನ ಇಲಾಖೆಯ ಸಹಾಯಕ ನಿಯಂತ್ರಕರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಶುಕ್ರವಾರ ಬೆಳಿಗ್ಗೆ ಲೋಕಾಯುಕ್ತ ಕಚೇರಿಗೆ ಕೋಟೆಕಣಿಯ ಉದ್ಯಮಿ ಯೊಬ್ಬರ ಜೊತೆ ಬಂದ ಸಹಾಯಕ ನಿಯಂತ್ರಕ ಗಜೇಂದ್ರ, ತನ್ನ ವಿರುದ್ಧ ಹಾಗೂ ತನ್ನ ಇಲಾಖೆಯ ವಿರುದ್ಧ ಪ್ರಕರಣ ದಾಖಲಿಸಬಾರದು ಮತ್ತು ದಾಳಿಯನ್ನೂ ಮಾಡಬಾರದು. ಅದಕ್ಕಾಗಿ 3 ತಿಂಗಳಿಗೊಮ್ಮೆ ₹25 ಸಾವಿರ ನೀಡುವುದಾಗಿ ಆಮಿಷ ಒಡ್ಡಿದ್ದಾರೆ ಎಂದು ಲೋಕಾಯುಕ್ತ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ಇನ್‌ಸ್ಪೆಕ್ಟರ್ ತಿಳಿಸಿದ್ದಾರೆ. ದೂರಿನ ಆಧಾರದಲ್ಲಿ ಅಧಿಕಾರಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.