ADVERTISEMENT

ತೊಕ್ಕೊಟ್ಟು: ಅಪರಿಚಿತ ವಾಹನ ಡಿಕ್ಕಿ, ಫ್ಲೈಓವರ್‌ನಿಂದ ಬಿದ್ದ ಬುಲೆಟ್ ಸವಾರ ಸಾವು

​ಪ್ರಜಾವಾಣಿ ವಾರ್ತೆ
Published 27 ಅಕ್ಟೋಬರ್ 2021, 12:38 IST
Last Updated 27 ಅಕ್ಟೋಬರ್ 2021, 12:38 IST
ತೊಕ್ಕೊಟ್ಟು ಫ್ಲೈಓವರ್‌ನಿಂದ ಕೆಳಗೆ ಬಿದ್ದ ಬುಲೆಟ್ ಸವಾರ ಸಾವು
ತೊಕ್ಕೊಟ್ಟು ಫ್ಲೈಓವರ್‌ನಿಂದ ಕೆಳಗೆ ಬಿದ್ದ ಬುಲೆಟ್ ಸವಾರ ಸಾವು   

ಉಳ್ಳಾಲ: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮಫ್ಲೈಓವರ್‌ನಿಂದ ಕೆಳಕ್ಕೆ ಬಿದ್ದು ಬುಲೆಟ್ ಸವಾರ ಸಾವನ್ನಪ್ಪಿರುವ ಘಟನೆ ತೊಕ್ಕೊಟ್ಟು ಜಂಕ್ಷನ್‌ನಲ್ಲಿ ಬುಧವಾರ ಸಂಜೆ ನಡೆದಿದೆ.

ಕುಂಪಲ ನಿವಾಸಿ ಸುಬ್ರಹ್ಮಣ್ಯ (50) ಮೃತಪಟ್ಟ‌ ವ್ಯಕ್ತಿ.

ಮಂಗಳೂರು ಕಡೆಯಿಂದ ಕುಂಪಲ ಕಡೆಗೆ ಬರುತ್ತಿದ್ದ ಬುಲೆಟ್‌ಗೆಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಪರಿಣಾಮ ಬುಲೆಟ್ ಫ್ಲೈಓವರ್‌ಗೆ ಡಿಕ್ಕಿ ಹೊಡೆದಿದ್ದು, ಸವಾರ ಸೇತುವೆಯಿಂದ ಕೆಳಗೆ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದರು.

ADVERTISEMENT

ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾರೆ. ನಾಗುರಿ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.