ADVERTISEMENT

ಇಚ್ಲಂಪಾಡಿ: ಲಾರಿಗೆ ಬಸ್ ಡಿಕ್ಕಿ- ಪ್ರಯಾಣಿಕ ಸಾವು

​ಪ್ರಜಾವಾಣಿ ವಾರ್ತೆ
Published 16 ಜೂನ್ 2025, 9:11 IST
Last Updated 16 ಜೂನ್ 2025, 9:11 IST
   

ಉಪ್ಪಿನಂಗಡಿ (ದಕ್ಷಿಣ ಕನ್ನಡ): ಇಲ್ಲಿಗೆ ಸಮೀಪದ ಇಚ್ಲಂಪಾಡಿ ಗ್ರಾಮದ ಲಾವತ್ತಡ್ಕದಲ್ಲಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಭಾನುವಾರ ರಾತ್ರಿ ಲಾರಿಗೆ ಬಸ್ ಡಿಕ್ಕಿ ಹೊಡೆದು, ಪ್ರಯಾಣಿಕರೊಬ್ಬರು ಮೃತಪಟ್ಡಿದ್ದಾರೆ. ಬಸ್ ನಲ್ಲಿದ್ದ ಎಂಟು ಪ್ರಯಾಣಿಕರು ಗಾಯಗೊಂಡಿದ್ದಾರೆ.

ಮೃತರನ್ನು ಕಾರ್ಕಳ ನಿವಾಸಿ ಶಂಕರ ನಾರಾಯಣ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಿಟಾಚಿಯನ್ನು ಸಾಗಿಸುತ್ತಿದ್ದ ಲಾರಿಯನ್ನು ಲಾವತ್ತಡ್ಕದಲ್ಲಿ ಹೆದ್ದಾರಿ ಪಕ್ಕದಲ್ಲಿ ನಿಲ್ಲಿಸಿದ್ದರು. ಕಾರ್ಕಳ ದರ್ಮಸ್ಥಳ ಮಾರ್ಗವಾಗಿ ಬೆಂಗಳೂರಿಗೆ ಸಂಚರಿಸುತ್ತಿದ್ದ 'ಸುಗಮ' ಬಸ್ ಹಿಂದಿನಿಂದ ಡಿಕ್ಕಿ ಹೊಡೆದಿತ್ತು. ಗಾಯಗೊಂಡ ಎಂಟು ಮಂದಿ ಬೇರೆ ಬೇರೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.